ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಂಭ್ರಮಾಚರಣೆಗೆ ಡಿಕೆ ಶಿವಕುಮಾರ್ ಸಿದ್ಧತೆ; ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪ್ಲಾನ್, 15 ಸಚಿವರಿಗೆ ಕೊಕ್?

ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಸಿಎಂ ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಸಂಪುಟ ಪುನರ್ರಚನೆ ಆಯ್ಕೆ ಮಾಡಬಹುದು.

ಬೆಂಗಳೂರು: ಮೇ 23, 2025 ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಲಿದೆ. ಎರಡು ವರ್ಷಗಳ ಆಡಳಿತವನ್ನು ಆಚರಿಸಲು ಮತ್ತು ನವೆಂಬರ್‌ನಲ್ಲಿ ಸಿಎಂ ಹುದ್ದೆಗೆ ಹಕ್ಕು ಮಂಡಿಸಲು ಉತ್ಸುಕರಾಗಿರುವ ಡಿ.ಕೆ ಶಿವಕುಮಾರ್ ಸಂಭ್ರಮಾಚರಣೆ ಮಾಡಲು ಉತ್ಸುಕರಾಗಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರಾಚನೆ ಮಾಡಲು ತಮ್ಮದೇ ಆದ ಯೋಜನೆಯಲ್ಲಿ ಮುಳುಗಿದ್ದಾರೆ. ಇದು ಅವರು ಸಿಎಂ ಆಗಿ ಮುಂದುವರಿಯಲು ಅನುವು ಮಾಡಿಕೊಡುತ್ತದೆ ಎಂದು ಮೂಲಗಳು ತಿಳಿಸಿವೆ.

ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಸಿಎಂ ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಸಂಪುಟ ಪುನರ್ರಚನೆ ಆಯ್ಕೆ ಮಾಡಬಹುದು. ಅಕ್ಟೋಬರ್ 2025ಕ್ಕೆ ಅವರು ಸಿಎಂ ಆಗಿ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುವ ಮೊದಲು ಏನು ಬೇಕಾದರೂ ಆಗಬಹುದು ಎಂದು ಕಾಂಗ್ರೆಸ್‌ನ ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ.

ಸಂಪುಟ ಪುನರಾಚನೆಗೆ ಹೈಕಮಾಂಡ್ ಅನುಮೋದಿಸಿದರೆ, ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನ ಭದ್ರಪಡಿಸಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಅವರು ಈಗಾಗಲೇ ಪಕ್ಷದ ಹೈಕಮಾಂಡ್ ಮತ್ತು ಶಿವಕುಮಾರ್‌ಗೆ ಪರೋಕ್ಷವಾಗಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಡಿಸಿಎಂ ಆಗಿ ಮುಂದುವರಿಯಲು ಅಭ್ಯಂತರವಿಲ್ಲ, ಅದರಲ್ಲಿ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಸೇರಿದಂತೆ ಉತ್ತಮ ಖಾತೆ ಅವರ ಬಳಿಯಿವೆ. ತಮ್ಮ ಸಚಿವ ಸಂಪುಟದಿಂದ 15 ಸಚಿವರನ್ನು ಕೈಬಿಡಲು ಅವರು ಸಿದ್ಧರಿದ್ದಾರೆ, ಅವರಲ್ಲಿ ಕೆಲವರು ತಮ್ಮ ಬೆಂಬಲಿಗ ಸಚಿವರು ಇದ್ದಾರೆ ಎಂದು ಹೇಳಲಾಗುತ್ತಿದೆ.

ಕೆಲವು ಶಾಸಕರಿಗೆ ಸಚಿವರ ವಿರುದ್ಧ ಅಸಮಾಧಾನವಿದೆ, ಇದನ್ನೇ ನೆಪವಾಗಿಟ್ಟುಕೊಂಡು ಸಚಿವರನ್ನು ಸಂಪುಟದಿಂದ ಕೈಬಿಡಲು ಸಿಎಂ ಮುಂದಾಗಿದ್ದಾರೆ. ಇದು ಸೋಮವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಸ್ಪಷ್ಟವಾಗಿತ್ತು.

ಸಚಿವರು ತಮ್ಮ ಪ್ರಸ್ತಾವನೆಗಳಿಗೆ ಸ್ಪಂದಿಸದಿರುವ ವಿಷಯವನ್ನು ಶಾಸಕರು ಬಹಿರಂಗವಾಗಿ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಅವರು ಸಚಿವರ ಬಗ್ಗೆ ಚಿಂತಿಸುತ್ತಿಲ್ಲ, ಬದಲಿಗೆ ಸಿಎಂ ಆಗಿ ಮುಂದುವರಿಯಲು ಶಾಸಕರ ಬೆಂಬಲ ಹೆಚ್ಚು ಮುಖ್ಯ ಎಂದು ಅವರು ಚಿಂತಿತರಾಗಿದ್ದಾರೆ ಎಂದು ಎಂಎಲ್ ಸಿಯೊಬ್ಬರು ತಿಳಿಸಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ನಡುವೆ ಗಲಾಟೆ ನಡೆದಿದೆ.

ಸಿಎಲ್‌ಪಿ ಸಭೆಯ ನಂತರ, ರಾಯಚೂರು ಮೂಲದ ಬೋಸರಾಜು, ಅಧಿಕಾರಿಯನ್ನು ವರ್ಗಾವಣೆ ಮಾಡುವ ಬಗ್ಗೆ ಶಾಸಕ ಬಸನಗೌಡ ದದ್ದಲ್‌ಗೆ ಪತ್ರ ನೀಡಿದ್ದಕ್ಕಾಗಿ ಪಾಟೀಲ್ ಅವರನ್ನು ಪ್ರಶ್ನಿಸಿದರು. ಇದೇ ವೇಳೆ ಪಾಟೀಲ್ ತಮ್ಮನ್ನು ತಾವು ಸಮರ್ಥಿಸಿಕೊಂಡರು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಾಸಕರ ಕೋರಿಕೆಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು. ಹೀಗಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT