ಬಿ ವೈ ವಿಜಯೇಂದ್ರ 
ರಾಜಕೀಯ

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ' ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ- BJP

‘ಬಿಜೆಪಿ-ಕರ್ನಾಟಕ’ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಬೆಂಗಳೂರು: ಮುಸ್ಲಿಮರಿಗಷ್ಟೇ ಮೀಸಲಾತಿ ನಿಗದಿಯಾಗಿದ್ದರೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವಲ್ಲ, ಕ್ರೈಸ್ತರು, ಜೈನ, ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ ಎಂದು ಹೇಳಿದ್ದಾರೆ. ಇದು 'ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ' ಎಂಬಂತೆ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆಂದು ಬಿಜೆಪಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, "ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ತತ್ವಕ್ಕೆ ಬಿಜೆಪಿ ಸದಾ ಬದ್ಧ, ಆದರೆತ ಕಾಂಗ್ರೆಸ್ ಸರ್ಕಾರ "ಮುಸ್ಲಿಮರಿಗೆ ಬಹುಪಾಲು ಇತರರಿಗೆ ಅಲ್ಪಪಾಲು" ಎಂಬ ನೀತಿ ಅನುಸರಿಸಲು ಹೊರಟು ಕುವೆಂಪು ಅವರು ಕಲ್ಪಿಸಿದ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಅಪಚಾರವಾದರೂ ಸರಿ ನಾವು ಅಧಿಕಾರ ದಲ್ಲುಳಿಯಲು ಮುಸ್ಲಿಂ ಸಮುದಾಯವನ್ನು ಓಲೈಸುವುದೇ ನಮ್ಮ ಹೆಗ್ಗುರಿ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಬಂದುಬಿಟ್ಟಿದೆ. ಕರ್ನಾಟಕದಲ್ಲಿ ಗುತ್ತಿಗೆ ಕಾಮಗಾರಿ ಹಂಚುವಲ್ಲಿಯೂ ಶೇ.4 ಮೀಸಲಾತಿ ನಿಗದಿಪಡಿಸುವ ಮೂಲಕ ಸಮಾಜದಲ್ಲಿ ಒಡಕು ಮೂಡಿಸಿ, ಧರ್ಮಗಳ ನಡುವೆ ಬಿರುಕು ಮೂಡಿಸುವ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಕೈ ಹಾಕಿದೆ.

ಮುಸ್ಲಿಮರಿಗಷ್ಟೇ ಮೀಸಲಾತಿ ನಿಗದಿಯಾಗಿದ್ದರೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವಲ್ಲ, ಕ್ರೈಸ್ತರು, ಜೈನ, ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ ಎಂದು ಹೇಳಿದ್ದಾರೆ. ಇದು 'ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ' ಎಂಬಂತೆ ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಹೊರಟಿದ್ದಾರೆ. ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರೂ ಸೇರಿದಂತೆ ಇತರ ಧಾರ್ಮಿಕ ಅಲ್ಪಸಂಖ್ಯಾತರೆಲ್ಲರಿಗೂ ಸಮಾನವಾಗಿ ಹಕ್ಕು, ಸವಲತ್ತುಗಳು ಹಂಚಿಕೆಯಾಗಬೇಕು, ಆದರೆ ಸಾಮಾಜಿಕ ನ್ಯಾಯದ ಬಗ್ಗೆ ಬೊಬ್ಬೆ ಹೊಡೆಯುವ ಕಾಂಗ್ರೆಸ್ ತನ್ನ ಆಡಳಿತದ ರಾಜ್ಯ ಸರ್ಕಾರದ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯವನ್ನು ಮೆಟ್ಟಿ ನಿಂತು ಮುಸ್ಲಿಂ ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವುದು ಸಂವಿಧಾನಕ್ಕೆ ದ್ರೋಹ ಬಗೆದಂತಾಗಿದೆ.

ಪ್ರಗತಿಪರರೆಂದು ಸ್ವಯಂ ಬಿಂಬಿಸಿಕೊಂಡು ಕಾಂಗ್ರೆಸ್ ಓಲೈಸುವ ಚಿಂತಕರು, ಸಾಹಿತಿಗಳು ಇಂತಹ ಸಾಮಾಜಿಕ ಅನ್ಯಾಯ ಹಾಗೂ ಸಾಮರಸ್ಯ ಕದಡುವ ಸರ್ಕಾರದ ನಿಲುವನ್ನು ನೋಡಿಯೂ ಕಣ್ಣು, ಕಿವಿ ಮುಚ್ಚಿಕೊಂಡಿದ್ದಾರೆ. ಇವರ ದೃತರಾಷ್ಟ್ರ ಧೋರಣೆ ನಮ್ಮದೇನಿದ್ದರೂ ಕಾಂಗ್ರೆಸ್ ಪರವಾದ ನಿಲುವನ್ನು ಪ್ರತಿಪಾದಿಸುವುದು ಮಾತ್ರ , ಇದೆ ನಮ್ಮ ಪ್ರಗತಿಪರ ಚಿಂತನೆ ಹಾಗೂ ಹೋರಾಟ ಎಂದು ತಮ್ಮ ಅಸಲಿ ಮುಖವಾಡವನ್ನು ಅನಾವರಣ ಮಾಡಿಕೊಂಡಿದ್ದಾರೆ.

‘ಬಿಜೆಪಿ-ಕರ್ನಾಟಕ’ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ, ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ. ನಮ್ಮ ಹೋರಾಟಕ್ಕೆ ಸರ್ಕಾರ ಬಗ್ಗದಿದ್ದರೆ ಜನರ ಮುಂದೆ ಈ ಹೋರಾಟವನ್ನು ಕೊಂಡೊಯ್ಯುತ್ತೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT