ಡಿಕೆಶಿ, ಎಂಬಿ ಪಾಟೀಲ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಡಿಕೆಶಿ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಿದ್ದರು; ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ: ಎಂ.ಬಿ ಪಾಟೀಲ್

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಐದು ವರ್ಷ ಪೂರೈಸಿದ ಕಾರಣ ಕಾಂಗ್ರೆಸ್‌ ಪಕ್ಷದ ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು.

ಬೆಳಗಾವಿ: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆದಿದ್ದ ಔತಣಕೂಟದಲ್ಲಿ ಪಕ್ಷದ ಎಲ್ಲಾ ಶಾಸಕರು ಭಾಗವಹಿಸಿದ್ದರು ಎಂದು ಸಚಿವ ಎಂಬಿ ಪಾಟೀಲ್ ಅವರು ಶನಿವಾರ ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಐದು ವರ್ಷ ಪೂರೈಸಿದ ಕಾರಣ ಕಾಂಗ್ರೆಸ್‌ ಪಕ್ಷದ ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಇದಕ್ಕೆ ಪರಮೇಶ್ವರ್‌ ಭಾಗವಹಿಸಿರಲಿಲ್ಲ. ಏಕೆಂದರೆ, ಅವರ ಆಪ್ತರೊಬ್ಬರು ನಿಧನರಾಗಿದ್ದ ಕಾರಣ ಅವರ ಬರಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ವಿಪಕ್ಷದವರು ಸುಮ್ಮನೇ ವಿವಾದಗಳನನ್ನೆಬ್ಬಿಸುತ್ತಾರೆ. ಈ ಭೋಜನಾಕೂಟದಲ್ಲಿ ಮುಖ್ಯಮಂತ್ರಿ ಸೇರಿದಂತೆ, ಸಚಿವ ಸತೀಶ್‌ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭಾಗವಹಿಸುವ ಮೂಲಕ ಈ ವಿವಾದಗಳಿಗೆ ತೆರೆ ಎಳೆದಿದ್ದಾರೆ ಎಂದು ತಿಳಿಸಿದರು.

ಅಧಿವೇಶನ ನಡೆದಾಗ ಸಾಮಾನ್ಯವಾಗಿ ಸಚಿವರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸುತ್ತಾರೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದರು.

ಕೆಪಿಸಿಸಿಯ ಮುಖ್ಯಸ್ಥರು ಯಾರು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯ ಮಟ್ಟದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT