ಡಿಕೆ ಶಿವಕುಮಾರ್ 
ರಾಜಕೀಯ

ರಾಜ್ಯದ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳು ಮಹಿಳೆಯರಿಗೆ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇತೃತ್ವದ ರಾಜ್ಯ ಮಹಿಳಾ ಕಾಂಗ್ರೆಸ್ ವಿಭಾಗದ ಕಾರ್ಯಕ್ಷಮತೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದರು.

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲಾಗಿದ್ದು, ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಕರೆ ನೀಡಿದ್ದಾರೆ. ಆದರೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮಹಿಳೆಯರು ಉತ್ತಮ ಕೆಲಸ ಮಾಡದಿರುವ ಬಗ್ಗೆ ಅವರು ನಿರಾಶೆ ವ್ಯಕ್ತಪಡಿಸಿದರು.

ಇಂದು ನಡೆದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇತೃತ್ವದ ರಾಜ್ಯ ಮಹಿಳಾ ಕಾಂಗ್ರೆಸ್ ವಿಭಾಗದ ಕಾರ್ಯಕ್ಷಮತೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದರು.

"ಮಹಿಳಾ ವಿಭಾಗದ ಬಗ್ಗೆ ನನಗೆ ಸಂತೋಷವಿಲ್ಲ; ಅದು ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ನೀವು ಏನನ್ನಾದರೂ ಸಾಧಿಸಲು ದೃಢನಿಶ್ಚಯ ಮಾಡಿದರೆ ಮುಂದೆ ಹಲವಾರು ಅವಕಾಶಗಳಿವೆ" ಎಂದು ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಡಿಸಿಎಂ, "ಮಹಿಳಾ ಮೀಸಲಾತಿ ಮಸೂದೆ ಜಾರಿಯಾದರೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 74 ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು. ನೀವು ಗೃಹಲಕ್ಷ್ಮಿ ಯೋಜನೆಯ ಕನಿಷ್ಠ 50 ಫಲಾನುಭವಿಗಳನ್ನು ಪಕ್ಷದ ಸದಸ್ಯರಾಗಿ ನೋಂದಾಯಿಸಿದರೆ ನಿಮಗೆ ತಾಲ್ಲೂಕು ಮಟ್ಟದ ನಿರ್ದೇಶಕರ ಹುದ್ದೆ ನೀಡಲಾಗುವುದು" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT