ಡಿ.ಕೆ ಶಿವಕುಮಾರ್ 
ರಾಜಕೀಯ

ಬಿಜೆಪಿ ಸಂಸ್ಕೃತಿಹೀನ ಪಕ್ಷ; ಅತ್ಯಾಚಾರ ಎಸಗಿದವರು, ನ್ಯಾಯಾಲಯದಲ್ಲಿ ಸ್ಟೇ ತಂದ ಬಾಂಬೆ ಬಾಯ್ಸ್ ಅವರದೇ ಪಕ್ಷದವರಲ್ಲವೇ?: ಡಿಕೆಶಿ

ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?

ಬೆಂಗಳೂರು: ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು.

ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ? ಎಂದು ತಿರುಗೇಟು ನೀಡಿದರು.

ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು ಎಂದು ವ್ಯಂಗವಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ