ಸಂಗ್ರಹ ಚಿತ್ರ 
ರಾಜಕೀಯ

ಶಾಸಕರ ಅಮಾನತು ಹಿಂಪಡೆಯಿರಿ: ಸ್ಪೀಕರ್'ಗೆ BJP ಒತ್ತಾಯ

ಅಮಾನತುಗೊಂಡ ಶಾಸಕರನ್ನು ವಿಧಾನಸಭೆ ಲಾಬಿ ಅಥವಾ ಸಭಾಂಗಣಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಅವರೇನು ಭಯೋತ್ಪಾದಕರೇ ಅಥವಾ ನಕ್ಸಲೀಯರೇ? ಎಂದು ಪ್ರಶ್ನಿಸಿದರು.

ಬೆಂಗಳೂರು: 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿದ ಆದೇಶವನ್ನು ಹಿಂಪಡೆಯುವಂತೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಬಿಜೆಪಿ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸ್ಪೀಕರ್ ಅವರ ನಿರ್ಧಾರವನ್ನು "ಕಾನೂನುಬಾಹಿರ, ಸಂವಿಧಾನಬಾಹಿರ, ಏಕಪಕ್ಷೀಯ" ಎಂದು ಕರೆದರು.

ಸ್ಪೀಕರ್ ಶಾಸಕರನ್ನು ಮಾತ್ರವಲ್ಲದೆ ಅವರ ಕ್ಷೇತ್ರದ ಜನರನ್ನು ಸಹ ಅವಮಾನಿಸಿದ್ದಾರೆ ಎಂದು ಅವರು ಹೇಳಿದರು.

ಅಮಾನತುಗೊಂಡ ಶಾಸಕರನ್ನು ವಿಧಾನಸಭೆ ಲಾಬಿ ಅಥವಾ ಸಭಾಂಗಣಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಅವರೇನು ಭಯೋತ್ಪಾದಕರೇ ಅಥವಾ ನಕ್ಸಲೀಯರೇ? ಎಂದು ಪ್ರಶ್ನಿಸಿದರು.

ಶಾಸಕರು ಸ್ಥಾಯಿ ಸಮಿತಿ ಸಭೆಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಸ್ಪೀಕರ್ ನಿರ್ಧಾರಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಬಿಜೆಪಿ ಶಾಸಕರು ವಿಧಾನಸಭೆಯ ಗೌರವವನ್ನು ರಕ್ಷಿಸಲು ಹೋರಾಡುತ್ತಿದ್ದಾರೆ. ಆದರೆ ಸ್ಪೀಕರ್ "ಹಿಟ್ಲರ್‌ನಂತೆ ವರ್ತಿಸಿದ್ದಾರೆಂದು ಕಿಡಿಕಾರಿದರು.

ನಾನು ಇಂದು ಬೆಳಿಗ್ಗೆ ಸ್ಪೀಕರ್ ಅವರೊಂದಿಗೆ ಮಾತನಾಡಿದೆ. ಅವರ ಈ ನಿರ್ಧಾರವು ವಿಧಾನಸಭೆಗೆ ಗೌರವವನ್ನು ತರುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇನೆ. ಮೊದಲ ಬಾರಿಗೆ ಸದಸ್ಯರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ. ಸ್ಪೀಕರ್ ಮತ್ತು ಕಾಂಗ್ರೆಸ್‌ಗೆ ತಿಳುವಳಿಕೆ ಇದೆಯೇ? ಎಂದು ವಾಗ್ದಾಳಿ ನಡೆಸಿದರು.

ಅಮಾನತುಗೊಂಡ ಶಾಸಕರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ನಾವೂ ವಿಧಾನಸಭೆಗೆ ಪ್ರವೇಶಿಸುವುದಿಲ್ಲ. ಸಮಿತಿ ಸಭೆಗಳಿಗೆ ಹಾಜರಾಗುವ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಏಪ್ರಿಲ್ 1 ಅಥವಾ 2 ರಂದು ಸ್ಪೀಕರ್ ಬೆಂಗಳೂರಿಗೆ ಹಿಂತಿರುಗುವವರೆಗೆ ನಾವು ಅವರ ನಿರ್ಧಾರಕ್ಕಾಗಿ ಕಾಯುತ್ತೇವೆ. ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದರು.

ಹಿಂದುಗಳಿಂದ ಶೇ.4ರಷ್ಟು ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿರುವ ಸರ್ಕಾರ ಅದನ್ನು ಮುಸ್ಲಿಮರಿಗೆ ನೀಡುತ್ತಿದೆ. ಮಂಗಳೂರಿನಲ್ಲಿ ಮುಸ್ಲಿಮರು ಈಗಾಗಲೇ ಶೇ.50 ರಷ್ಟು ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ. ಸರ್ಕಾರದ ಪ್ರಸ್ತುತ ನಿರ್ಧಾರದಿಂದ ಈ ಮೀಸಲಾತಿ ಶೇ.75ರಷ್ಟಾಗಲಿದೆ. ಹೀಗಾಗಿ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಾಟ ಮುಂದುವರಯಲಿದೆ. ವಿಚಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ. ಪಕ್ಷವು ರಾಜ್ಯವ್ಯಾಪಿ ಪ್ರತಿಭಟನೆಗಳನ್ನು ಆಯೋಜಿಸುತ್ತದೆ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT