ಡಿಕೆ ಶಿವಕುಮಾರ್ PTI
ರಾಜಕೀಯ

ಹನಿಟ್ರ್ಯಾಪ್ ಯತ್ನ: ಆ ಬಗ್ಗೆ ಮಾತನಾಡಲ್ಲ, ದೂರು ದಾಖಲಿಸಲು ರಾಜಣ್ಣಗೆ ಹೇಳಿದ್ದೇನೆ- ಡಿ.ಕೆ ಶಿವಕುಮಾರ್

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ಪಕ್ಷಾತೀತವಾಗಿ ಕನಿಷ್ಠ 48 ಶಾಸಕರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಮತ್ತು ಈ ಜಾಲ ದೇಶಾದ್ಯಂತ ಹರಡಿದೆ.

ಬೆಂಗಳೂರು: ಸಚಿವರು ಮತ್ತು ಶಾಸಕರನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ಯತ್ನ ನಡೆದಿದೆ ಎಂಬ ಹೇಳಿಕೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದ್ಯ ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ವಿಚಾರದಿಂದ ದೂರವಿರಲು ಅವರು ಪ್ರಯತ್ನಿಸುತ್ತಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ಪಕ್ಷಾತೀತವಾಗಿ ಕನಿಷ್ಠ 48 ಶಾಸಕರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಮತ್ತು ಈ ಜಾಲ ದೇಶಾದ್ಯಂತ ಹರಡಿದೆ. ಅನೇಕ ಕೇಂದ್ರ ಸಚಿವರು ಸಹ ಇದರಲ್ಲಿ ಸಿಲುಕಿದ್ದಾರೆ ಎಂದು ಆರೋಪಿಸಿದ್ದರು.

ಈ ಕುರಿತು ಭಾನುವಾರ ಪ್ರತಿಕ್ರಿಯಿಸಿದ ಶಿವಕುಮಾರ್, ಕಾಂಗ್ರೆಸ್‌ನ ಕರ್ನಾಟಕ ಘಟಕದ ಮುಖ್ಯಸ್ಥನಾಗಿ ನಾನು ರಾಜಣ್ಣ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ದೂರು ದಾಖಲಿಸುವಂತೆ ಕೇಳಿದ್ದೇನೆ. ಅವರು ನನಗೆ ಏನು ಹೇಳಿದರು ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ನಾನು ಅವರಿಗೆ ದೂರು ದಾಖಲಿಸುವಂತೆ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಸಕ್ರಿಯವಾಗಿರುವ ಹನಿಟ್ರ್ಯಾಪ್ ದಂಧೆಯ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ತಿಳಿಸಲು ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂಬ ವದಂತಿಗಳ ನಡುವೆ, ರಾಜಣ್ಣ ಅವರ ಪುತ್ರ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿಯ ಹಿಂದಿನ ಕಾರಣವೇನೆಂದು ವರದಿಗಾರರು ಪ್ರಶ್ನಿಸಿದ್ದಕ್ಕೆ, 'ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಭೇಟಿಯಾಗಬಹುದು. ಅನೇಕ ಸಂಸದರು, ಶಾಸಕರು ಮತ್ತು ಜನರು ಸಹ ಮುಖ್ಯಮಂತ್ರಿ ಮತ್ತು ನನ್ನನ್ನು ಭೇಟಿಯಾಗುತ್ತಾರೆ' ಎಂದು ಹೇಳಿದರು.

ಹನಿಟ್ರ್ಯಾಪ್ ವಿಷಯದ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಆ ಬಗ್ಗೆ ನನ್ನನ್ನು ಕೇಳಬೇಡಿ. ಆ ಬಗ್ಗೆ ನಾನು ಯಾವುದಕ್ಕೂ ಉತ್ತರಿಸುವುದಿಲ್ಲ' ಎಂದು ಶಿವಕುಮಾರ್ ಹೇಳಿದರು.

ಪಕ್ಷದ ಹೈಕಮಾಂಡ್ ಜೊತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳುವಿರಾ ಎಂದು ಕೇಳಿದಾಗ, ಅಂತಹ ಸುಳ್ಳು ಸುದ್ದಿಗಳ ಬಗ್ಗೆ ಯಾರನ್ನೂ ಭೇಟಿ ಮಾಡುವ ಅಗತ್ಯವಿಲ್ಲ ಎಂದರು.

ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಷಯವನ್ನು ಎತ್ತುವುದು ಕಾಂಗ್ರೆಸ್ ಮತ್ತು ಸರ್ಕಾರಕ್ಕೆ ಮುಜುಗರ ತಂದಿದೆಯೇ ಎಂಬ ಪ್ರಶ್ನೆಗೆ, 'ಈ ಬಗ್ಗೆ ಮುಖ್ಯಮಂತ್ರಿಯವರನ್ನು ಕೇಳಿ' ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT