ಬಿಜೆಪಿ ಹೈಕಮಾಂಡ್ ನೋಟಿಸ್ 
ರಾಜಕೀಯ

ಯತ್ನಾಳ್, ವಿಜಯೇಂದ್ರ ಬಣಕ್ಕೆ BJP ಹೈಕಮಾಂಡ್ ಶಾಕ್: 3 ಶಾಸಕರು, ಇಬ್ಬರು ಮಾಜಿ ಸಚಿವರಿಗೆ ಶೋಕಾಸ್ ನೋಟಿಸ್

ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ.

ಬೆಂಗಳೂರು: ಬಣ ರಾಜಕೀಯ ಮತ್ತು ಆಂತರಿಕ ಕಚ್ಚಾಟದಿಂದ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕರ್ನಾಟಕ ಬಿಜೆಪಿ ನಾಯಕರಿಗೆ ಕಮಲ ಪಡೆಯ ಹೈಕಮಾಂಡ್ ಶಾಕ್ ನೀಡಿದ್ದು, 3 ಶಾಸಕರು, ಇಬ್ಬರು ಮಾಜಿ ಸಚಿವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ (show-cause notice) ನೀಡಿತ್ತು.

ಇದರ ಬೆನ್ನಲ್ಲೇ ಇದೀಗ ಮೂವರು ಶಾಸಕರು ಹಾಗೂ ಇಬ್ಬರು ಮಾಜಿ ಸಚಿವರಿಗೆ ಶೋಕಾಸ್​ ನೋಟಿಸ್ ನೀಡಿದೆ. 72 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ.

ಪಕ್ಷದ ಆಂತರಿಕ ವಿಚಾರ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆ ಮಾಡಿದ ಆರೋಪದ ಮೇಲೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಹಾಗೂ ಬಿ.ಪಿ.ಹರೀಶ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಇದರ ಜೊತೆಗೆ ಯಡಿಯೂರಪ್ಪನವರ ಆಪ್ತರಾದ ಮಾಜಿ ಸಚಿವರಾದ ರೇಣುಕಾಚಾರ್ಯ ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರಿಗೂ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಣ ರಾಜಕೀಯಕ್ಕೆ ಖಡಕ್ ಸಂದೇಶ

ಇನ್ನು ಇಂದು ಶೋಕಾಸ್ ನೋಟಿಸ್ ಬಂದಿರುವ ಶಾಸಕ ಬಿ.ಪಿ ಹರೀಶ್ ಅವರು ಯತ್ನಾಳ್​ ಬಣದಲ್ಲಿ ಗುರುತಿಸಿಕೊಂಡಿದ್ದರೆ, ಮಾಜಿ ಸಚಿವರಾದ ಎಂಪಿ ರೇಣುಕಾಚಾರ್ಯ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರೇಣುಕಾಚಾರ್ಯ ಹಾಗೂ ಸುಬ್ರಹ್ಮಣ್ಯ ನಾಯ್ಡು ಸೇರಿಕೊಂಡು ಯತ್ನಾಳ್​ಗೆ ಟಾಂಗ್ ಕೊಡಲು ಸಭೆ ಮೇಲೆ ಸಭೆ ಮಾಡಿದ್ದರು.

ಅಲ್ಲದೇ ಬೃಹತ್ ಸಮಾವೇಶ ಮಾಡುವ ಮೂಲಕ ಪರೋಕ್ಷವಾಗಿ ಯತ್ನಾಳ್​ ಹಾಗೂ ಹೈಕಮಾಂಡ್​ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪನವರ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದರ ನಡುವೆಯೇ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪಕ್ಷವಿರೋಧಿಗಳಿಗೂ ಖಡಕ್ ಎಚ್ಚರಿಕೆ

ಅಂತೆಯೇ ಎಸ್​​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರೆಬೆಲ್ ಶಾಸಕರಾಗಿದ್ದು, ಇವರು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರು ಉಳಿದಿದ್ದಾರೆ. ಅಲ್ಲದೇ ಬಹಿರಂಗವಾಗಿಯೇ ಕಾಂಗ್ರೆಸ್​ ನಾಯಕರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಇವರುಗಳಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT