ಬೀದರ್ ನಲ್ಲಿ ಬಿಜೆಪಿ ಪ್ರತಿಭಟನೆ 
ರಾಜಕೀಯ

ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಆದಾಗ್ಯೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಮತ್ತು ತಮ್ಮ ಹೇಳಿಕೆಯನ್ನು "ತಿರುಚಲಾಗಿದೆ" ಎಂದು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನ ಬದಲಾಯಿಸುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆ ಖಂಡಿಸಿ ಮಂಗಳವಾರ ಬಿಜೆಪಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿತು.

ಆದಾಗ್ಯೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಮತ್ತು ತಮ್ಮ ಹೇಳಿಕೆಯನ್ನು "ತಿರುಚಲಾಗಿದೆ" ಎಂದು ಸೋಮವಾರ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ, ಕರ್ನಾಟಕ ಸರ್ಕಾರ "ತುಷ್ಟೀಕರಣ ರಾಜಕೀಯ" ಮಾಡುತ್ತಿದೆ ಎಂದು ಆರೋಪಿಸಿ ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು.

ಶಿವಕುಮಾರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಮತ್ತು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಬಸವನಗುಡಿ, ಪದ್ಮನಾಭನಗರ ಮತ್ತು ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

"ಜೈ ಭೀಮ್" ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷವನ್ನು "ದಲಿತ ವಿರೋಧಿ" ಮತ್ತು "ಸಂವಿಧಾನ ವಿರೋಧಿ" ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್