ಬಿಜೆಪಿ ಪೋಸ್ಟ್ 
ರಾಜಕೀಯ

ಸಂವಿಧಾನ ಕುರಿತ ಡಿಕೆಶಿ ಹೇಳಿಕೆ ಕಾಂಗ್ರೆಸ್ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ: BJP

ಕಾಂಗ್ರೆಸ್ ಓಲೈಕೆ ಹಾಗೂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾಳೆ ಭಾರತವನ್ನೇ ತುಂಡರಿಸುತ್ತದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆಯೇ ಸಾಕ್ಷಿ .

ಬೆಂಗಳೂರು/ಬೆಳಗಾವಿ: ಸಂವಿಧಾನ ಬದಲು ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆಯು ಕಾಂಗ್ರೆಸ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.

ಕಲಬುರಗಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮುಸಲ್ಮಾನರ ಹಿತಕ್ಕಾಗಿ ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ನೀಡಿದ್ದಾಯ್ತು. ಈಗ ಮುಸಲ್ಮಾನರ ಏಳಿಗೆಗಾಗಿ ಸಂವಿಧಾನವನ್ನೆ ಬದಲಾಯಿಸುತ್ತೇವೆ ಡಿಸಿಎಂ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಓಲೈಕೆ ಹಾಗೂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾಳೆ ಭಾರತವನ್ನೇ ತುಂಡರಿಸುತ್ತದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆಯೇ ಸಾಕ್ಷಿ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, "ಭಾರತದ ಪ್ರಜಾತಂತ್ರ ವ್ಯವಸ್ಥೆಯ ಸಾರ್ವಭೌಮ ಎಂದು ಗೌರವಿಸುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನೇ ತಿದ್ದುಪಡಿ ಮಾಡಿದರೂ ಸರಿ ಮುಸ್ಲಿಮರಿಗೆ ಮೀಸಲಾತಿ ನೀಡುವುದೇ ನಮ್ಮ ಪ್ರಥಮ ಆದ್ಯತೆ, ದೇಶ, ಸಂವಿಧಾನಕ್ಕಿಂತ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ನಮ್ಮ ಕರ್ತವ್ಯ" ಎಂಬ ಅರ್ಥದಲ್ಲಿ ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕಾಂಗ್ರೆಸ್ ನ ಮುಖ್ಯ ಅಜೆಂಡಾ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆಂದು ಹೇಳಿದ್ದಾರೆ.

ಕಳೆದ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ವಿರುದ್ಧ ಸಂವಿಧಾನ ಬದಲಾಯಿಸುತ್ತಾರೆ ಎಂಬ ವ್ಯವಸ್ಥಿತ ಅಪಪ್ರಚಾರ ನಡೆಸಿ ಶೋಷಿತ ಸಮುದಾಯಗಳಲ್ಲಿ ಗೊಂದಲವೆಬ್ಬಿಸಿ ಅಧಿಕಾರ ಕಬಳಿಸಲು ಕಸರತ್ತು ನಡೆಸಿದ್ದ ಕಾಂಗ್ರೆಸ್'ನ ಅಸಲಿ ಮುಖವಾಡ ಏನು ಎಂಬುದನ್ನು ಇಂದು ರಾಜ್ಯ ಹಾಗೂ ದೇಶದ ಜನತೆ ಅರ್ಥ ಮಾಡಿಕೊಳ್ಳುತ್ತಿದ್ದಾರೆ.

ವಿಶೇಷವಾಗಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಸಮುದಾಯಗಳು 'ಕಾಂಗ್ರೆಸ್ ಇರುವುದು ಮುಸ್ಲಿಮರ ಹಿತಕಾಯಲು ಮಾತ್ರ' ಎಂಬ ವಾಸ್ತವ ಸ್ಥಿತಿಯನ್ನು ಅರಿಯಬೇಕಿದೆ. ಈಗಾಗಲೇ ಪರಿಶಿಷ್ಟರ ಕಲ್ಯಾಣ ಕಾರ್ಯಕ್ಕಾಗಿ ನಿಗದಿಯಾಗಿದ್ದ SCP-TSP ಹಣವನ್ನು ಕಾಂಗ್ರೆಸ್ ತನ್ನ ಬಿಟ್ಟಿ ಭಾಗ್ಯಗಳ ಯೋಜನೆಗೆ ಬಳಸಿಕೊಂಡು, ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕ್ಕೂ ಕನ್ನ ಹಾಕಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಕನಿಷ್ಠ ಮಟ್ಟದ ಅನುದಾನವನ್ನೂ ಬಿಡುಗಡೆ ಮಾಡದೆ ತಾನು "ಹಿಂದು" ವಿರೋಧಿ ಎನ್ನುವುದನ್ನು ಸಾಬೀತುಪಡಿಸಿಕೊಂಡಿದೆ.

ಇದೀಗ ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಂವಿಧಾನದ ಆಶಯಗಳನ್ನು ಮೂಲೆಗೆ ಸರಿಸಿ, ಸಂವಿಧಾನವನ್ನೇ ಬುಡಮೇಲು ಮಾಡಲು ಸಿದ್ದ ಎಂಬಂತೆ ಕಾಂಗ್ರೆಸ್ಸಿಗರು ನಡೆದುಕೊಳ್ಳುತ್ತಿದ್ದಾರೆ, ಸಂವಿಧಾನ ವಿರೋಧಿಗಳ್ಯಾರು? ಸಂವಿಧಾನವನ್ನು ಬದಲಾಯಿಸುವವರು ಯಾರು? ಸಂವಿಧಾನವನ್ನು ಇದುವರೆಗೂ ಅತಿ ಹೆಚ್ಚು ಬಾರಿ ತಿದ್ದುಪಡಿ ಮಾಡಿದವರು ಯಾರು? ಎಂಬ ಪ್ರಶ್ನೆಗಳಿಗೆ ನಿಶ್ಚಿತವಾಗಿಯೂ 'ಕಾಂಗ್ರೆಸ್' ಎಂದು ಉತ್ತರ ಹೇಳಲೇಬೇಕಾಗಿದೆ ಎಂದು ತಿಳಿಸಿದ್ದಾರೆ.

ಬಾಬಾ ಸಾಹೇಬರ ಸಿದ್ದಾಂತವಾದಿಗಳು ಎಂಬ ಮುಖವಾಡ ತೊಟ್ಟ ಕೆಲವರು ಹಿಂದುಳಿದ ಹಾಗೂ ಶೋಷಿತ ಸಮುದಾಯಗಳನ್ನು ದಿಕ್ಕು ತಪ್ಪಿಸಲು ಈವರೆವಿಗೂ ಭಾರತೀಯ ಜನತಾ ಪಾರ್ಟಿಯ ವಿರುದ್ಧ ಅಪಪ್ರಚಾರದಲ್ಲಿ ನಿರತರಾಗಿದ್ದರು. ಇದೀಗ ಸ್ವತಃ ಡಿಕೆ ಶಿವಕುಮಾರ್ ಅವರೇ ಸಂವಿಧಾನ ತಿದ್ದುಪಡಿ ಮಾಡಿಯಾದರೂ ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೇನೆ ಎಂದು ಹೇಳುವ ಮೂಲಕ ಸಂವಿಧಾನಕ್ಕೇ ಸವಾಲೊಡ್ಡುವ ಮಾತನಾಡಿದ್ದಾರೆ. ಇದಕ್ಕೆ ಪ್ರಗತಿಪರ ಹಾಗೂ ದಲಿತಪರ ಎಂದು ಹೇಳಿಕೊಳ್ಳುವ ಬುದ್ದಿಜೀವಿಗಳೆನಿಸಿಕೊಂಡವರು ಏನು ಹೇಳುತ್ತಾರೆ?

ಪರಿಶಿಷ್ಟ ಸಮುದಾಯ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಗಳು ಈಗಲಾದರೂ ಕಾಂಗ್ರೆಸ್ ನಡೆ, ಅದರ ಚಿಂತನೆ ಹಾಗೂ ಅದರ ಧೋರಣೆಯನ್ನು ಅರಿತು ತಕ್ಕ ಪಾಠ ಕಲಿಸಲು ಮುಂದಾಗಬೇಕಿದೆ.

ಭಾರತೀಯ ಜನತಾ ಪಾರ್ಟಿಯ ಹೋರಾಟ ಈ ದೇಶದ ಪರಂಪರೆ, ಸಂಸ್ಕೃತಿ ರಕ್ಷಿಸಿ ಸಂವಿಧಾನದ ಆಶಯಗಳನ್ನು ಚಾಚೂ ತಪ್ಪದೇ ಜನರತ್ತ ಕೊಂಡೊಯ್ಯುವುದೇ ಆಗಿದೆ, ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳು, ಯೋಜನೆಗಳೂ ದೇಶದ ಒಟ್ಟು ಅಭಿವೃದ್ಧಿ, ಜನಕಲ್ಯಾಣವನ್ನು ಕೇಂದ್ರೀಕರಿಸಿ ದೇಶದ ಜನರ ಹೃದಯಗೆದ್ದಿದೆ, ಕೇವಲ ಮುಸ್ಲಿಮರ ಕಲ್ಯಾಣವನ್ನು ಮಾತ್ರ ಕೇಂದ್ರೀಕರಿಸಿರುವ ಕಾಂಗ್ರೆಸ್ ವಿರುದ್ಧ ಪಾಠ ಕಲಿಸಲು ಜನತೆ ಬೀದಿಗಿಳಿದು ಹೋರಾಡಬೇಕಾದ ಅನಿವಾರ್ಯ ಸ್ಥಿತಿ ಬಂದೊದಗಿದೆ. ಇಲ್ಲದಿದ್ದರೆ ಭಾರತೀಯತೆ ಹಾಗೂ ಸಂವಿಧಾನ ಎರಡಕ್ಕೂ ಅಪಾಯ ತಂದೊಡ್ಡುವಲ್ಲಿ ಮುಂದಾಗಿರುವ ಕಾಂಗ್ರೆಸ್ ಗೆ ಈಗಲೇ ಅಂಕುಶ ಹಾಕದಿದ್ದರೆ ಮುಂದೊಂದು ದಿನ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಜನತೆ ಅರಿಯಬೇಕಿದೆ ಎಂದು ಹೇಳಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್‌ನ ಸಂವಿಧಾನವಾದಿಗಳು ಮತ್ತು ಅಂಬೇಡ್ಕರ್‌ ವಾದಿಗಳು ಎಂದು ಕರೆಯಲ್ಪಡುವವರು ಎಲ್ಲಿ ಅಡಗಿದ್ದೀರಾ? ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್ "ಸಂವಿಧಾನ ಬದಲಾಗುತ್ತದೆ" ಎಂದು ಹೇಳಿದ್ದಾರೆ. ಕಾಂಗ್ರೆಸ್‌ ತನ್ನ 55 ವರ್ಷಗಳ ಆಳ್ವಿಕೆಯಲ್ಲಿ, ತುರ್ತು ಪರಿಸ್ಥಿತಿಯ ಸಮಯದಲ್ಲಿ 4 ತಿದ್ದುಪಡಿಗಳು ಮತ್ತು 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಗಳು ನಡೆಯುವ ಮೊದಲೇ ಜವಾಹರಲಾಲ್ ನೆಹರು ತಂದ ಮೊದಲ ತಿದ್ದುಪಡಿ ಸೇರಿದಂತೆ ನಮ್ಮ ಸಂವಿಧಾನಕ್ಕೆ 77 ತಿದ್ದುಪಡಿಗಳನ್ನು ಮಾಡಿದೆ. ಕಾಂಗ್ರೆಸ್ ಮತ್ತು ಸಂವಿಧಾನದ ಮೇಲಿನ ಅದರ ಬೂಟಾಟಿಕೆಗೆ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT