ಬಿ.ವೈ. ವಿಜಯೇಂದ್ರ, ಯತ್ನಾಳ್ ಸಾಂದರ್ಭಿಕ ಚಿತ್ರ 
ರಾಜಕೀಯ

ಯತ್ನಾಳ್ ವಿರುದ್ಧ ಶಿಸ್ತು ಕ್ರಮ: ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರು ನೀಡಿಲ್ಲ- ಬಿ.ವೈ ವಿಜಯೇಂದ್ರ

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ.

ಬೆಂಗಳೂರು: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷ ಉಚ್ಛಾಟನೆ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಯತ್ನಾಳ್ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ವಿಜಯೇಂದ್ರ, ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ಸ್ಪಷ್ಪಪಡಿಸಿದ್ದಾರೆ.

ಬಿಜೆಪಿ ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT