ಜಿಟಿ ದೇವೇಗೌಡ 
ರಾಜಕೀಯ

CM ಆಗಲು HDK ಬೆಂಬಲ ಕೇಳಿರಬಹುದು ಸತೀಶ್ ಜಾರಕಿಹೊಳಿ: ಜಿ.ಟಿ ದೇವೇಗೌಡ ಹೊಸ ಬಾಂಬ್

ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದರು ಎಂಬುದು ಜನತೆಗೆ ಗೊತ್ತಾಗಲೇ ಇಲ್ಲ. ಅಭಿವೃದ್ಧಿ ವಿಚಾರ ಚರ್ಚೆ ಆಗಿದ್ದರು ಜನ ಖುಷಿಯಾಗುತ್ತಿದ್ದರು ಎಂದರು.

ಮೈಸೂರು: ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ತಮಗೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರಬಹುದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗುವ ಅವಕಾಶ ಸಿಕ್ಕದರೆ ಜೆಡಿಎಸ್​​ನ 18 ಶಾಸಕರ ಬೆಂಬಲ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜಾರಕಿಹೊಳಿಯವರು ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದರೆ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲ ನೀಡಿದರೂ ನಾನು ಈ ವಿಚಾರದಲ್ಲಿ ತಟಸ್ಥನಾಗಿರುತ್ತೇನೆಂದು ಮಾರ್ಮಿಕವಾಗಿ ನುಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಬಿಜೆಪಿಯ ಆಂತರಿಕ ವಿಷಯ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಮುಂದೆ ಇನ್ನೂ ಏನೇನು ಬೆಳವಣಿಗೆ ಆಗುತ್ತೆ ಕಾದು ನೋಡೋಣ ಎಂದು ತಿಳಿಸಿದರು.

ಹನಿಟ್ರ್ಯಾಪ್ ಪ್ರಕರಣದ ವಿಚಾರವಾಗಿ ಪ್ರತಿಯಿಸಿ, ಸದನದಲ್ಲಿ ಸುನಿಲ್ ಕುಮಾರ್ ಹಾಗೂ ರಾಜಣ್ಣ ಈ ವಿಚಾರ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎನಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಸದನದಲ್ಲಿ ರಾಜ್ಯದ ಅಭಿವೃದ್ಧಿ ವಿಚಾರ ಚರ್ಚೆ ಆಗಬೇಕಿತ್ತು. ಕೇವಲ ಗಲಾಟೆ ಗದ್ದಲದಲ್ಲೇ ಸದನ ಮುಗಿಯಿತು. ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದರು ಎಂಬುದು ಜನತೆಗೆ ಗೊತ್ತಾಗಲೇ ಇಲ್ಲ. ಅಭಿವೃದ್ಧಿ ವಿಚಾರ ಚರ್ಚೆ ಆಗಿದ್ದರು ಜನ ಖುಷಿಯಾಗುತ್ತಿದ್ದರು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT