ರವಿಕುಮಾರ್ (ಸಂಗ್ರಹ ಚಿತ್ರ) 
ರಾಜಕೀಯ

Honeytrap row: ಸಿಬಿಐ, ನ್ಯಾಯಾಂಗ ನೇತೃತ್ವದಲ್ಲಿ ತನಿಖೆಗೆ BJP ಆಗ್ರಹ

ಈ ಹನಿಟ್ರ್ಯಾಪ್ ಹಿಂದೆ ಯಾರ್ಯಾರಿದ್ದಾರೆ? ಯಾರ್ಯಾರನ್ನು ಬಲಿ ತೆಗೆದುಕೊಳ್ಳುವ ವಿಚಾರ ಇದೆ ಎಂಬುದು ಬಹಿರಂಗ ಆಗಬೇಕಿದೆ. ರಾಜಣ್ಣ ಇರಬಹುದು, ಅವರ ಮಗ ರಾಜೇಂದ್ರರ ಕೊಲೆ ಯತ್ನದ ಹೇಳಿಕೆ ಏನಿದೆಯೋ ಅದು ಗಂಭೀರ ವಿಚಾರ.

ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಇದರ ಸಮಗ್ರ ತನಿಖೆಗೆ ಸಿಬಿಐ ಅಥವಾ ನ್ಯಾಯಾಂಗ ತನಿಖೆಯಾಗಬೇಕೆಂದು ವಿರೋಧ ಪಕ್ಷ ಬಿಜೆಪಿ ಗುರುವಾರ ಆಗ್ರಹಿಸಿದೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಈ ಹನಿಟ್ರ್ಯಾಪ್ ಹಿಂದೆ ಯಾರ್ಯಾರಿದ್ದಾರೆ? ಯಾರ್ಯಾರನ್ನು ಬಲಿ ತೆಗೆದುಕೊಳ್ಳುವ ವಿಚಾರ ಇದೆ ಎಂಬುದು ಬಹಿರಂಗ ಆಗಬೇಕಿದೆ. ರಾಜಣ್ಣ ಇರಬಹುದು, ಅವರ ಮಗ ರಾಜೇಂದ್ರರ ಕೊಲೆ ಯತ್ನದ ಹೇಳಿಕೆ ಏನಿದೆಯೋ ಅದು ಗಂಭೀರ ವಿಚಾರ ಎಂದು ಹೇಳಿದರು.

ಸರ್ಕಾರ ಕೂಡಲೇ ರಾಜೇಂದ್ರ ಅವರಿಗೆ ಭದ್ರತೆ ಒದಗಿಸಬೇಕು. ಸರ್ಕಾರದ ಒಳಗೆ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿ, ಕಾಂಗ್ರೆಸ್ಸಿನ ಒಳಗೇ ಈ ಸ್ಥಿತಿ ಬಂದರೆ, ಬೇರೆ ಪಕ್ಷದ ನಾಯಕರ ಪರಿಸ್ಥಿತಿ ಏನು ಎಂಬುದನ್ನು ಕೂಡ ನಾವು ಗಂಭೀರವಾಗಿ ಯೋಚಿಸಬೇಕಿದೆ. ಹನಿಟ್ರ್ಯಾಪ್ ವಿಚಾರವನ್ನು ಸಿಬಿಐ ಅಥವಾ ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಲು ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು,

ಒಳ ಮೀಸಲಾತಿ ಕುರಿತು ಮಾತನಾಡಿ, ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಕೊಟ್ಟಿದ್ದ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದ ಮೀಸಲಾತಿಯನ್ನು ಕಾಂಗ್ರೆಸ್ ಸರಕಾರ ನಿಗದಿಪಡಿಸಿದರೆ ಅದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

ಜಸ್ಟಿಸ್ ನಾಗಮೋಹನ್‍ದಾಸ್ ಅವರು ನೀಡಿದ ವರದಿಯನ್ನು ಗಮನಿಸಿ ನಾವು ನಿರ್ಧಾರ ಮಾಡುತ್ತೇವೆ. ಪಕ್ಷವು ನಿನ್ನೆ ಕೈಗೊಂಡ ತೀರ್ಮಾನದಂತೆ ಪಕ್ಷದ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದರು.

ಹಾಲಿನ ಬೆಲೆ ಏರಿಕೆಯ ಕುರಿತು ಮಾತನಾಡಿದ, ಈ ಸರ್ಕಾರ ಮನೆ ಮುರುಕ ಸರ್ಕಾರ.. ಹಾಲಿನ ದರ ಲೀಟರ್​ಗೆ 4 ರೂಪಾಯಿ ಏರಿಸಲು ನಿರ್ಧಾರ ಮಾಡಿದ್ದಾರೆ. ಜನರಿಗೆ ದರ ಏರಿಕೆ ಬರೆ ಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಮೂರು ಬಾರಿ ಹಾಲಿನ ಬೆಲೆಗಳನ್ನು ಏರಿಕೆ ಮಾಡಿದೆ. ಸರ್ಕಾರ ಕೂಡಲೇ ಹಾಲಿನ ದರ ಏರಿಕೆಯನ್ನ ವಾಪಸ್ ಪಡೆಯಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!