ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಮಹಾದೇವಪ್ಪನಿಗೂ ಶಾಕು, ಕಾಕಾ ಪಾಟೀಲಗೂ ಶಾಕು; ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿ: ಎಚ್.ಡಿ ಕುಮಾರಸ್ವಾಮಿ ಟಾಂಗ್

ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಮೇಲಿನ ದರ 4 ರುಪಾಯಿ ಏರಿಸಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, 2023 ಆಗಸ್ಟ್‌ನಲ್ಲಿ 3, 2024 ಜೂನ್‌ನಲ್ಲಿ 2 ಮತ್ತು 2025 ಮಾರ್ಚ್ ಅಂದರೆ ಈಗ 4 ಏರಿಕೆ ಮಾಡುವ ಮೂಲಕ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಹೊಂದಿದೆ. ಇದು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಕಿಡಿಕಾರಿದ್ದಾರೆ.

ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ 36 ಪೈಸೆ ಬರೆ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್‌ಗೆ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ. ದರ ಏರಿಕೆ, ತೆರಿಗೆ ಹೇರಿಕೆ ಸರ್ಕಾರ. ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ, ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ ಎಂದು ವಾಗ್ದಾಳಿ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್