ಆರ್. ಅಶೋಕ್  
ರಾಜಕೀಯ

ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ಕರ್ನಾಟಕ ಜಾತಿಗಣತಿ ವರದಿಯೇ ಮಾದರಿ: ಆರ್. ಅಶೋಕ್ ತಿರುಗೇಟು

ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ನಿಮ್ಮ ಗಣತಿಯೇ ಮಾದರಿ. ಜಾತಿ ಗಣತಿಗೆ ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ.

ಬೆಂಗಳೂರು: ಕೇಂದ್ರ ಸರ್ಕಾರದ ಜಾತಿ ಗಣತಿಗೆ ಕರ್ನಾಟಕ ಮಾದರಿಯನ್ನು ಅಳವಡಿಸಿ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿರುಗೇಟು ನೀಡಿದ್ದಾರೆ.

ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ನಿಮ್ಮ ಗಣತಿಯೇ ಮಾದರಿ ಎಂದು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಾತಿ ಗಣತಿಗೆ ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ. ಮೂಲ ಪ್ರತಿ ಕಳೆದು ಹೋಗಿರುವ, ಕಾರ್ಯದರ್ಶಿಗಳ ಸಹಿಯೇ ಇಲ್ಲದ, ಪುಟಕ್ಕೆ 5-10 ರೂಪಾಯಿ ನೀಡಿ ಶಾಲಾ ಮಕ್ಕಳ ಕೈಯಲ್ಲಿ ಅರ್ಜಿ ಭರ್ತಿ ಮಾಡಿಸಿರುವ, ನಾಯಿಗಳು ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಹೋಗದ, ಹತ್ತು ವರ್ಷಗಳಾದರೂ ಸ್ವೀಕರಿಸಿದ ನಿಮ್ಮ ಜಾತಿ ಗಣತಿ ವರದಿ, ಜಾತಿ ಜನಗಣತಿಯನ್ನು ಹೇಗೆ ಮಾಡಬಾರದು ಎನ್ನುವುದಕ್ಕೆ ಮಾದರಿ ಎಂದಿದ್ದಾರೆ.

ಜಾತಿ ಜನಗಣತಿಯನ್ನ ಬಿಜೆಪಿ ವಿರೋಧಿಸುತ್ತಲೇ ಬಂದಿದೆ ಎಂದು ತಾವು ಹೇಳಿರುವುದು ಹಸಿ ಸುಳ್ಳು. 2010ರಲ್ಲಿ ಅಂದಿನ ಲೋಕಸಭೆಯ ವಿಪಕ್ಷ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರು 2011ರ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಬಿಜೆಪಿ ಬೆಂಬಲಿಸುತ್ತದೆ ಎಂದು ಲಿಖಿತ ರೂಪದಲ್ಲಿ ಯುಪಿಎ ಸರ್ಕಾರಕ್ಕೆ ತಿಳಿಸಿದ್ದರು. ಸಂಸತ್ತಿನಲ್ಲಿ ಅಂಗೀಕರಿಸಲಾದ ಸರ್ವಾನುಮತದ ನಿರ್ಣಯವನ್ನೂ ಬಿಜೆಪಿ ಬೆಂಬಲಿಸಿತ್ತು.

ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯ ಬದಲು ಕಾಟಾಚಾರಕ್ಕೆ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ – 2011 (SECC-2011) ಸಮೀಕ್ಷೆಯ ನಡೆಸಿತು. ಕರ್ನಾಟಕದ ಜಾತಿ ಗಣತಿಯಂತೆ ಕಳಪೆ ಯೋಜನೆ ಮತ್ತು ಅಸಮರ್ಥ ಅನುಷ್ಠಾನದಿಂದಾಗಿ ಅದು ಸಂಪೂರ್ಣವಾಗಿ ವಿಫಲವಾಯಿತು. ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ ನಂತರವೂ ಅದರ ಫಲಿತಾಂಶಗಳನ್ನು ಬಿಡುಗಡೆ ಮಾಡಲೇ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಗಣತಿ ಬಗ್ಗೆ ಇರುವ ನಿಜವಾದ ಬದ್ಧತೆ ಎಂದು ಅಶೋಕ್ ಕಿಡಿಕಾರಿದ್ದಾರೆ.

ಬಿಜೆಪಿಗೆ ಜಾತಿ ಗಣತಿಯನ್ನ ಎಂದಿಗೂ ಚುನಾವಣಾ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳಲಿಲ್ಲ. ಅಧಿಕಾರವಿದ್ದಾಗ ಜಾತಿ ಜನಗಣತಿ ಮಾಡುವ ನಿರ್ಧಾರ ಕೈಗೊಂಡು ಬದ್ಧತೆ ಪ್ರದರ್ಶನ ಮಾಡಿದ್ದೇವೆಯೇ ಹೊರತು ವಿಪಕ್ಷದಲ್ಲಿದಾಗ ಮೊಸಳೆ ಕಣ್ಣೀರು ಸುರಿಸಿ, ಅಧಿಕಾರ ಇದ್ದಾಗ ನಿರ್ಲಕ್ಷ್ಯ ಮಾಡುವ ಕೀಳು ರಾಜಕೀಯ ಮಾಡಿಲ್ಲ. ಇದು ಸಾಮಾಜಿಕ ನ್ಯಾಯದ ಬಗ್ಗೆ ನಮಗಿರುವ ನೈಜವಾದ ಬದ್ಧತೆ. ಜಾತಿ ಜನಗಣತಿ ಬಗ್ಗೆ ಬಿಜೆಪಿಯದ್ದು ಇದ್ದ ತಕರಾರು ಒಂದೇ. ಅದು ರಾಜಕೀಯ ದಾಳವಾಗಿ ದುರ್ಬಳಕೆ ಆಗಬಾರದು ಎಂಬುದು.

ಕೇಂದ್ರ ಸರ್ಕಾರ ಈಗ ನಡೆಸಲಿರುವ ಜಾತಿ ಗಣತಿ ಅತ್ಯಂತ ಪಾರದರ್ಶಕವಾಗಿ, ವೈಜ್ಞಾನಿಕವಾಗಿ, ಸದುದ್ದೇಶದಿಂದ ನಡೆಯಲಿದೆಯೇ ಹೊರತು ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದಂತೆ ರಾಜಕೀಯ ಅನುಕೂಲಕ್ಕಾಗಿ ಮೂಗಿನ ನೇರಕ್ಕೆ ದತ್ತಾಂಶವನ್ನು ತಿರುಚುವ ದುರುದ್ದೇಶದಿಂದ ಮಾಡುವುದಿಲ್ಲ. ಕರ್ನಾಟಕದ ಜಾತಿ ಗಣತಿ ಪ್ರಕ್ರಿಯೆ ಜಾತಿಗಣತಿಯನ್ನ ಹೇಗೆ ನಡೆಸಬಾರದು ಎಂಬುದಕ್ಕೆ ಮಾದರಿಯೇ ಹೊರತು ಅದರಲ್ಲಿ ಅನುಸರಿವಂತಹ ಯಾವುದೇ ಒಳ್ಳೆಯ ಅಂಶಗಳೂ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

ಕಳ್ಳಸಾಗಣೆದಾರರನ್ನು ಮಣಿಪುರದತ್ತ ಸೆಳೆಯುತ್ತಿರುವ ಮಾದಕ ದ್ರವ್ಯ ವ್ಯಾಪಾರ (ಜಾಗತಿಕ ಜಗಲಿ)

ನದಿಗೆ ಬಟ್ಟೆ ಹೊಗೆಯಲು ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ: ಭಯಭೀತರಾದ ಜನ, Video!

4 ಲಕ್ಷ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಭಾರತ ಗುಡುಗು

SCROLL FOR NEXT