ಡಿ.ಕೆ.ಶಿವಕುಮಾರ್ 
ರಾಜಕೀಯ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ ಶಿವಕುಮಾರ್

ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು.

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು.

ಸಮಾಜದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದರೆ ಜನಸಂಖ್ಯೆಯ ಆಧಾರದ ಮೇಲೆ ದೇಶದ ಜನರಿಗೆ ಸೌಲಭ್ಯಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ,‌ ಬೇಡಿಕೆಯಾಗಿದೆ.

ಮುಖ್ಯಮಂತ್ರಿಗಳು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಇದಕ್ಕೆ ಬೇಕಾದಂತಹ ಸಹಕಾರ ನೀಡಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!