ಮಲ್ಲಿಕಾರ್ಜುನ ಖರ್ಗೆ ಮತ್ತು ವಿಜಯೇಂದ್ರ. 
ರಾಜಕೀಯ

ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ: ಖರ್ಗೆ ಕುರಿತು BJP ವ್ಯಂಗ್ಯ

ನಮ್ಮ ಕಾರ್ಯಕರ್ತರಿಗೆ ಒಂದೇ ಒಂದು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ. ನಮ್ಮನ್ನು ಕೆಣಕಬೇಡಿ, ನಾವು ತಿರುಗಿಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ ಎಂದು ಮಲ್ಲಿಕಾರ್ಜುವನ ಖರ್ಗೆ ಗುಡುಗಿದ್ದರು.

ಬೆಂಗಳೂರು: ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದರ ಬದಲು ಬಿಜೆಪಿ, ಆರ್.ಎಸ್.ಎಸ್ ಗೆ 'ನಾವು ತಿರುಗಿ ಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ' ಎಂಬ ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಬಿಜೆಪಿ ವ್ಯಂಗ್ಯವಾಡಿದೆ.

ಹುಬ್ಬಳ್ಳಿಯಲ್ಲಿ ಗುರುವಾರ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ರ‍್ಯಾಲಿ ನಡೆಸಿತ್ತು. ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದ ಮಲ್ಲಿಕಾರ್ಜುವನ ಖರ್ಗೆಯವರು, ನಮ್ಮ ಕಾರ್ಯಕರ್ತರಿಗೆ ಒಂದೇ ಒಂದು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ. ನಮ್ಮನ್ನು ಕೆಣಕಬೇಡಿ, ನಾವು ತಿರುಗಿಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ ಎಂದು ಗುಡುಗಿದ್ದರು.

ಈ ಹೇಳಿಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಹಾಗೂ ಆರ್.ಎಸ್.ಎಸ್ ಸಂಘಟನೆಗಳ ಕುರಿತು ನೀವು ವಾರ್ನಿಂಗ್ ನೀಡಿರುವ ಪರಿ ಗಮನಿಸಿದರೆ ಸರ್ವಾಧಿಕಾರಿ ಸಂಸ್ಕೃತಿಯ ಭಾಗವೆಂಬಂತೆ ಭಾಸವಾಗುತ್ತಿದೆ. ನಿಮ್ಮ ಮಾತಿನ ದಾಟಿ, ನಿಮ್ಮ ಹಿರಿತನ ಹಾಗೂ ಅನುಭವದ ಘನತೆಯನ್ನು ಕುಗ್ಗಿಸಿದೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ರೀತಿಯಲ್ಲಿ ಹೇಳಿಕೆ ನೀಡಿರುವ ರೀತಿ ಅತ್ಯಂತ ವಿಪರ್ಯಾಸವೇ ಸರಿ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಷ್ಪ್ರಭಕ್ತರ ಸಂಘಟನೆ, ಭಾರತೀಯ ಜನತಾ ಪಾರ್ಟಿಯು ರಾಷ್ಟ್ರ ಕಟ್ಟುವುದಕ್ಕಾಗಿ ಸಂಕಲ್ಪಿಸಿ ಜನ್ಮತಾಳಿದ ರಾಜಕೀಯ ಪಕ್ಷ, ಕಾಂಗ್ರೆಸ್ ನಂತೆ ವ್ಯಕ್ತಿ ಪೂಜೆ, ಕುಟುಂಬ ಪೂಜೆಗೆ ತನ್ನನ್ನು ತೊಡಗಿಸಿಕೊಂಡ ಪಕ್ಷವಲ್ಲ, ಭಟ್ಟಂಗಿತನ ನಿಮ್ಮ ಪಕ್ಷದ ಧ್ಯೇಯಘೋಷ, ಎಂದೂ ರಾಷ್ಟ್ರದ ಬಗ್ಗೆ ಚಿಂತನೆ ನಡೆಸದೇ,ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯದೇ ಬಡವರನ್ನು ಬಡವರನ್ನಾಗಿಯೇ ಇರಿಸಿದ ಪಾಪದ ಫಲ ಇಂದಿನ ನಿಮ್ಮ ಕಾಂಗ್ರೆಸ್ ನ ಹೀನಾಯ ಸ್ಥಿತಿಗೆ ಕಾರಣವಾಗಿದೆ. ಇಷ್ಟಾಗಿಯೂ ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದರ ಬದಲು ಬಿಜೆಪಿ, ಆರ್.ಎಸ್.ಎಸ್ ಗೆ 'ನಾವು ತಿರುಗಿ ಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ' ಎಂಬ ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ.

ನಿಮ್ಮ ಪಕ್ಷದ ಒಬ್ಬರು, ಬಿಜೆಪಿ-ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ ಎಂದು ಆರ್ಭಟಿಸಿದರೆ, ಮತ್ತೊಬ್ಬರು ರಾಜ್ಯದ ಯಾವುದೇ ಭಾಗದಲ್ಲಿ ಬಿಜೆಪಿ ತನ್ನ ಚಟುವಟಿಕೆ ನಡೆಸಲು ಎಲ್ಲಿಯೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡುತ್ತಾರೆ. ಕರ್ನಾಟಕದಲ್ಲಿ ಪಾಳೆಗಾರಿಕೆ ರಾಜಕಾರಣಕ್ಕೆ, ಸರ್ವಾಧಿಕಾರಿ ಆಡಳಿತಕ್ಕೆ ಅವಕಾಶ ಇಲ್ಲ ಎಂಬುದರ ಇತಿಹಾಸ ನಿಮಗೆ ಹಾಗೂ ನಿಮ್ಮ ಪಕ್ಷದವರಿಗೆ ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!