ಯು.ಟಿ ಖಾದರ್ 
ರಾಜಕೀಯ

ಯತ್ನಾಳ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ, ಹೀಗಾಗಿ ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ: ಸ್ಪೀಕರ್

ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಾಕಿದ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಸಚಿವ ಶಿವಾನಂದ ಪಾಟೀಲ್ ಅವರು ನೀಡಿದ ರಾಜೀನಾಮೆ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅವರಿಗೆ ಇನ್ನೊಬ್ಬರು ಶಾಸಕರು ವೈಯಕ್ತಿಕ ಸವಾಲು ಹಾಕಿದ್ದಾರೆ. ಸವಾಲು ಸ್ವೀಕಾರ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.

ಪಾಟೀಲ್ ಅವರು ಷರತ್ತುಬದ್ಧ ರಾಜೀನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

ವೈಯಕ್ತಿಕ ವಿಚಾರಗಳನ್ನು ರಾಜಕಾರಣದಲ್ಲಿ ಬಳಸಬೇಕೋ ಇಲ್ಲವೊ ಅನ್ನೋದು ಅವರವರ ವಿವೇಚನೆ ಬಿಟ್ಟಿರುವ ವಿಚಾರ. ಎಲ್ಲವೂ ಬದಲಾಗುತ್ತಿರುವ ಹಾಗೆ ರಾಜಕಾರಣವೂ ಬದಲಾಗುತ್ತಿದೆ, ಪಾಟೀಲ್ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಪರಿಶೀಲನೆ ಮಾಡುತ್ತೇನೆ ಎಂದು ಖಾದರ್ ಹೇಳಿದರು.

ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ್ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ್’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ್ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಬಸನಗೌಡ ಪಾಟೀಲ್ ಯಾತ್ನಾಳ್ ರಾಜೀನಾಮೆ ನೀಡಿದ ನಂತರ ತಮ್ಮ ರಾಜೀನಾಮೆ ಅಂಗೀಕರಿಸಬೇಕು ಎಂದು ಶಿವಾನಂದ ಪಾಟೀಲ್ ಷರತ್ತು ಹಾಕಿದ್ದಾರೆ.

ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ದಿಗಾರರ ಜತೆ‌ ಮಾತನಾಡಿ ಶಿವಾನಂದ ಪಾಟೀಲ್ ಅವರು, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದು ವೈಯಕ್ತಿಕ ತೀರ್ಮಾನ. ಯತ್ನಾಳ್ ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!