ವಿಪಕ್ಷ ನಾಯಕ ಆರ್.ಅಶೋಕ್ 
ರಾಜಕೀಯ

KPSC ಅನ್ಯಾಯದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಅಭ್ಯರ್ಥಿಗಳ ಮೇಲೆ ಸರ್ಕಾರ ಸೇಡಿನ ಕ್ರಮ: BJP ಆರೋಪ

ಮಧ್ಯರಾತ್ರಿ ಆದರೂ ಹಾಲ್ ಟಿಕೆಟ್ ಕೈಗೆ ಸಿಕ್ಕಿಲ್ಲ, ಬೆಳಗಾದರೆ ಪರೀಕ್ಷೆ, ಇಂತಹ ಅವಾಂತರದ ನಡುವೆ ಪಾಪ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಯಲ್ಲಿನ ಭಾಷಾಂತರ ಎಡವಟ್ಟಿನಿಂದ ಅನ್ಯಾಯಕ್ಕೊಳಗಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿ, ಮೇ 3ರಿಂದ ಅಂದರೆ ಇಂದಿನಿಂದ ಆರಂಭವಾಗುವ ಮುಖ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಅನುಮತಿ ಪಡೆದಿದ್ದರೆ, ಅವರಿಗೆ ಹಾಲ್ ಟಿಕೆಟ್ ಕೊಡಲು ಸತಾಯಿಸಿ ಸೇಡು ತೀರಿಸಿಕೊಳ್ಳುತ್ತಿದೆ ಈ ಪಾಪಿ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ಶನಿವಾರ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಯಲ್ಲಿನ ಭಾಷಾಂತರ ಎಡವಟ್ಟಿನಿಂದ ಅನ್ಯಾಯಕ್ಕೊಳಗಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿ, ಮೇ 3ರಿಂದ ಅಂದರೆ ಇಂದಿನಿಂದ ಆರಂಭವಾಗುವ ಮುಖ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಅನುಮತಿ ಪಡೆದಿದ್ದರೆ, ಅವರಿಗೆ ಹಾಲ್ ಟಿಕೆಟ್ ಕೊಡಲು ಸತಾಯಿಸಿ ಸೇಡು ತೀರಿಸಿಕೊಳ್ಳುತ್ತಿದೆ ಈ ಪಾಪಿ ಕಾಂಗ್ರೆಸ್ ಸರ್ಕಾರ.

ಒಂದು ಕಡೆ ಧೋ ಎಂದು ಸುರಿಯುತ್ತಿರುವ ಮಳೆ, ಮತ್ತೊಂದು ಕಡೆ ಅರ್ಜಿ ತುಂಬಲು ಯಾವ ದಾಖಲಾತಿಗಳು ಬೇಕೆ ಎನ್ನುವ ಗೊಂದಲ, ಹತ್ತಿರದಲ್ಲಿ ಒಂದು ಜೆರಾಕ್ಸ್ ಅಂಗಡಿ ಇಲ್ಲ, ಕುಡಿಯೋಕೆ ನೀರಿಲ್ಲ, ಕಾಫಿ ತಿಂಡಿಗೆ ಒಂದು ಹೋಟೆಲ್ ಇಲ್ಲ, ಹೆಣ್ಣುಮಕ್ಕಳಿಗೆ ಶೌಚಾಲಯವಿಲ್ಲ, ಹಸುಗೂಸುಗಳಿಗೆ ಹಾಲುಣಿಸೋಕೆ ಜಾಗ ಇಲ್ಲ, ಮಧ್ಯರಾತ್ರಿ ಆದರೂ ಹಾಲ್ ಟಿಕೆಟ್ ಕೈಗೆ ಸಿಕ್ಕಿಲ್ಲ, ಬೆಳಗಾದರೆ ಪರೀಕ್ಷೆ, ಇಂತಹ ಅವಾಂತರದ ನಡುವೆ ಪಾಪ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅಂದರೆ ತಮಗೆ ಯಾಕಿಷ್ಟು ದ್ವೇಷ? ಯಾಕಿಷ್ಟು ಅಸಡ್ಡೆ? ಬಡವರು ಮಕ್ಕಳು ಮುಂದೆ ಬರಬಾರದ? ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಹಿತಾಸಕ್ತಿ ಕಾಪಡುವುದಾಗಿ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಬೇರೆ ದಾರಿ ಇಲ್ಲದೆ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿ ಆದೇಶ ತಂದರೆ ಹಾಲ್ ಟಿಕೆಟ್ ಕೊಡಲು ಸತಾಯಿಸಿ ನೆಮ್ಮದಿಯಾಗಿ ಪರೀಕ್ಷೆ ಬರೆಯಲೂ ತೊಂದರೆ ಮಾಡಿದ್ದೀರಿ. ನೂರಾರು ಕನಸುಗಳನ್ನು ಇಟ್ಟುಕೊಂಡು ಹಗಲು ರಾತ್ರಿ ಎನ್ನದೆ ವರ್ಷಗಟ್ಟಲೆ ತಯಾರಿ ನಡೆಸಿದ ಅಭ್ಯರ್ಥಿಗಳ ಶಾಪ ನಿಮ್ಮ ಸರ್ಕಾರಕ್ಕೆ ತಟ್ಟದೇ ಇರದು ಎಂದು ಕಿಡಿಕಾರಿದ್ದಾರೆ.

ಪ್ರಹ್ಲಾದ್ ಜೋಶಿಯವಸು ಟ್ವೀಟ್ ಮಾಡಿ, ರಾಜ್ಯದಲ್ಲಿ ‌ತುಘಲಕ್‌ ಸರ್ಕಾರ ನಡೆಯುತ್ತಿದೆಯೇ? ತಡರಾತ್ರಿ‌ ದೂರದ ಊರಿನಿಂದ‌ ಮಹಿಳೆಯರು ಹೇಗೆ ಬೆಂಗಳೂರಿಗೆ ಬರಲು ಸಾಧ್ಯ? ಕನ್ನಡ ಭಾಷಿಗರ ರಕ್ಷಣೆ, ಅವರ ಕನಸು ನುಚ್ಚುನೂರು ಮಾಡುತ್ತಿರುವ ನಿಮ್ಮ ಸರ್ಕಾರ ಪ್ರತಿಭಟನೆಗಳ‌‌ ಹೆಸರಲ್ಲಿ ಕಾಲಾಹರಣ ಮಾಡುತ್ತಾ ದುರಾಡಳಿತ ನಡೆಸುತ್ತಿದ್ದೀರಾ. ಇಂದು ಕೆ ಎ ಎಸ್ ಮುಖ್ಯ ಪರೀಕ್ಷೆ ಆರಂಭ, ನಿನ್ನೆ ಮಧ್ಯರಾತ್ರಿಯವರೆಗೂ ಕೆಪಿಎಸ್ ಸಿಯ ಮುಂದೆ ಅಭ್ಯರ್ಥಿಗಳು ನಿಲ್ಲುವ ಸ್ಥಿತಿ.. ಕೆಪಿಎಸ್ ಸಿ ಇಂದು ಭಾರತಕ್ಕೆ ಕಪ್ಪು ಚುಕ್ಕೆಯಾಗಿರುವುದು ಅತ್ಯಂತ ದುರಾದೃಷ್ಟಕರ ಹಾಗೂ ಸರ್ಕಾರದ ಅತಿದೊಡ್ಡ ವೈಫಲ್ಯಗಳಲ್ಲಿ ಒಂದು. ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ.. ನಿಮ್ಮ ದುರಾಡಳಿತದ ಸರ್ಕಾರದಿಂದ ಜನ ಬೇಸತ್ತಿದ್ದಾರೆ.. ಕೆಪಿಎಸ್ ಸಿ ಸಾಲು ಸಾಲು ತಪ್ಪುಗಳು ಮಾಡುತ್ತಿದೆ, ಎಷ್ಟು ಬಾರಿ ಕ್ಷಮೆ ಕೋರುತ್ತಿರಾ? ಈ ವೈಫಲ್ಯಕ್ಕೆ ನಿಮ್ಮ ರಾಜಿನಾಮೆ ಒಂದೇ ಉತ್ತರ ಎಂದು ಹೇಳಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ- ಇಂದು ಇಡೀ ದೇಶಕ್ಕೆ ಒಂದು ಕೆಟ್ಟ ಸಂದೇಶ ರವಾನಿಸಿದೆ. ಒಂದು ಲೋಕಸೇವಾ ಆಯೋಗ ಹೇಗೆ ಮಾದರಿಯಾಗಿ ಇರಬಾರದು ಅನ್ನೊದನ್ನು ಇಡೀ ದೇಶಕ್ಕೆ ತೋರಿಸಿದೆ. ಪರೀಕ್ಷೆ ಆರಂಭಕ್ಕೂ‌ ಮೊದಲಿನಿಂದಲೂ ಗೊಂದಲ, ತಪ್ಪುಗಳು. ಪರೀಕ್ಷೆಯಲ್ಲಿ ಸಾಲು ಸಾಲು ತಪ್ಪು, ಎಡವಟ್ಟುಗಳು. ತಪ್ಪು ತಪ್ಪಾಗಿ ಕನ್ನಡದಲ್ಲಿ ಪ್ರಶ್ನೆಗಳ ಪ್ರಕಟ. ಎರಡೆರಡು ಬಾರಿ ಪರೀಕ್ಷೆ, ಅದರಲ್ಲಿಯೂ ಸಾಲು ಸಾಲು ತಪ್ಪುಗಳು. ದುರಾಡಳಿತ ಅನ್ನೊದು ಕೆಪಿಎಸ್ ಸಿ ಮತ್ತು ನಿಮ್ಮ‌ ಕಾಂಗ್ರೆಸ್ ಸರ್ಕಾರ ಇಡೀ ದೇಶಕ್ಕೆ ತೋರಿಸುತ್ತಿದೆ.

ಸಿದ್ದರಾಮಯ್ಯ ನವರೇ, ಕಳೆದ ಸದನದಲ್ಲಿ ಕೆಪಿಎಸ್ ಸಿ ವಿಚಾರವಾಗಿ "ಸರ್ವಪಕ್ಷ ಸಭೆ ಕರೆಯುತ್ತೇನೆ.. ಎಲ್ಲರಿಂದ ಅಭಿಪ್ರಾಯ ಪಡೆಯುತ್ತೇನೆ.. ಕನ್ನಡಿಗರಿಗೆ ಅನ್ಯಾಯ ಆಗಲು ಬಿಡುವುದಿಲ್ಲಾ.." ಹೀಗೆ ಸುಳ್ಳು ಹೇಳಿ ರಾತ್ರೋರಾತ್ರಿ ದುರಾಡಳಿತದ ಈ ಪರೀಕ್ಷೆ ನಡೆಸಲು ಮುಂದಾಗುತ್ತೀರುವ ನಿಮಗೆ ನಾಚಿಕೆ ಮಾನ ಮರ್ಯಾದೆ ಇಲ್ಲವೇ? ತಡರಾತ್ರಿ‌ ದೂರದ ಊರಿನಿಂದ‌ ಮಹಿಳೆಯರು ಹೇಗೆ ಬೆಂಗಳೂರಿಗೆ ಬರಲು ಸಾಧ್ಯ? ಕೆಪಿಎಸ್ ಸಿ ಕರ್ನಾಟಕದ ಪಾಲಿಗೆ ಶಾಪದ ಸಂಸ್ಥೆಯಾಗಿದೆ. ಕೆಪಿಎಸ್ ಸಿ ದೇಶಕ್ಕೆ ಕಪ್ಪು ಚುಕ್ಕೆಯಾಗಿರುವುದು ಅತ್ಯಂತ ದುರಾದೃಷ್ಟಕರ ಹಾಗೂ ಸರ್ಕಾರದ ಅತಿದೊಡ್ಡ ವೈಫಲ್ಯಗಳಲ್ಲಿ ಒಂದು. ನಿಮ್ಮ ದುರಾಡಳಿತದ ಸರ್ಕಾರ ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ.. ನಿಮಗೆ ಸರ್ಕಾರದ ದುರಾಡಳಿತ ರಾಜ್ಯಕ್ಕೆ ಬೇಡವಾಗಿದೆ. ನಿಮ್ಮ ರಾಜಿನಾಮೆ ಮಾತ್ರ ನ್ಯಾಯ ಒದಗಿಸುತ್ತದೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಟ್ವೀಟ್ ಮಾಡಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಯಾರಿಗೂ ನೆಮ್ಮದಿಯಿಲ್ಲಯ KPSC ಪೂರ್ವಭಾವಿ ಪರೀಕ್ಷೆಯಲ್ಲಿನ ಭಾಷಾಂತರ ಎಡವಟ್ಟಿನಿಂದ ಅನ್ಯಾಯಕ್ಕೊಳಗಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿ ಇಂದಿನಿಂದ ಆರಂಭವಾಗುವ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ಪಡೆದಿದ್ದರು, ಮಧ್ಯರಾತ್ರಿ ಅರ್ಜಿ ತುಂಬಿ ಪ್ರವೇಶಾತಿ (ಹಾಲ್ ಟಿಕೆಟ್) ಪಡೆಯುವಂತೆ ಗೊಂದಲ ಸೃಷ್ಟಿಸಿರುವ KPSC ಕಾರ್ಯವೈಖರಿ ಪರೀಕ್ಷಾರ್ಥಿಗಳಿಗೆ ಅನಗತ್ಯ ಕಿರುಕುಳ ನೀಡುವ ದುರುದ್ದೇಶ ಪ್ರತಿಬಿಂಬಿಸಿದೆ. ಉದ್ಯೋಗಾಂಕ್ಷಿ ಅಭ್ಯರ್ಥಿಗಳ ಭವಿಷ್ಯದ ಜೊತೆ KPSC ಚೆಲ್ಲಾಟವಾಡುತ್ತಿದ್ದರೆ ರಾಜ್ಯ ಸರ್ಕಾರ ಕಣ್ಣುಮುಚ್ಚಿಕೊಂಡು ನೋಡುತ್ತಿದೆ.

ಮೇ 2ರ ಮಧ್ಯರಾತ್ರಿ 12 ಗಂಟೆಯವರೆಗೆ KPSC ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಮಧ್ಯರಾತ್ರಿ ಹಾಲ್ ಟಿಕೆಟ್ ಪಡೆದು ಹೋಗಿ ಮರುದಿನ ಬೆಳಗ್ಗೆಯೇ ಪರೀಕ್ಷಾ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯುವಂತೆ ಮಾಡಿರುವ ಗೊಂದಲದ ವ್ಯವಸ್ಥೆಯಿಂದ ಹಿಂಸೆ ಅನುಭವಿಸುತ್ತಿರುವ ಪರೀಕ್ಷಾರ್ಥಿಗಳು ಹಾಗೂ ಅವರ ಕುಟುಂಬದವರ ಶಾಪ ರಾಜ್ಯ ಸರ್ಕಾರಕ್ಕೆ ತಟ್ಟದೇ ಬಿಡದು. ವಿಧಾನಸಭಾ ಅಧಿವೇಶನದಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಹಿತಾಸಕ್ತಿ ಕಾಪಡುವುದಾಗಿ ಸ್ವತಃ ಮುಖ್ಯಮಂತ್ರಿಗಳೇ ಮಾತು ಕೊಟ್ಟು, ಪರೀಕ್ಷಾರ್ಥಿಗಳಿಗೆ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಿಜೆಪಿ ನೊಂದವರ ದನಿಯಾಗಿ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT