ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

ಜಾತಿಗಣತಿ ವಿವಾದ: ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ- ಸಚಿವ ಸತೀಶ್ ಜಾರಕಿಹೊಳಿ

ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ.

ಹುಬ್ಬಳ್ಳಿ: ನಾನು ಸರ್ಕಾರದ ಸರ್ಕಾರದ ಭಾಗವಾಗಿದ್ದರೂ, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಹೇಳಿದರು.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ಜಾತಿ ಜನಗಣತಿ ವರದಿ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ. ಅಂತಹ ಯಾವುದೇ ನಿರ್ಧಾರವನ್ನು ತಿರಸ್ಕರಿಸುವ ಅಧಿಕಾರವೂ ನನಗಿದೆ ಎಂದು ಹೇಳಿದರು.

ಇದೇ ವೇಳೆ ಜಾತಿ ಜನಗಣತಿ ವರದಿಯ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಚಿವರು ಒಪ್ಪಿಕೊಂಡರು.

ಭಿನ್ನಾಭಿಪ್ರಾಯ ಹೊಂದಿರುವವರು ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಸರ್ಕಾರ ನಮ್ಮ ಅಭಿಪ್ರಾಯಗಳನ್ನು ಪರಿಗಣಿಸುತ್ತದೆ ಎಂದು ವಿಶ್ವಾಸವಿದೆ ಎಂದು ಹೇಳಿದರು.

ಮೇ 9 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗುವ ನಿರೀಕ್ಷೆಯಿರುವುದರಿಂದ, ಏನಾಗುತ್ತದೆ ಎಂದು ನೋಡೋಣ ಎಂದರು.

ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ಯೂಟರ್ನ್ ಹೊಡೆದಿದೆ. ಜಾತಿ ಗಣತಿ ಬಗ್ಗೆ ಅವರಿಗೆ ಏಕಾಏಕಿ ಪ್ರೀತಿ ಬಂದಿದೆ ಎಂದು ವ್ಯಂಗ್ಯವಾಡಿದರು.

ನಾವು ಜಾತಿ ಗಣತಿ ಮಾಡಿದಾಗ ಬಿಜೆಪಿಯವರು ವಿರೋಧ ಮಾಡಿದರು. ಈಗ ಕೇಂದ್ರ ಸರಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದಕ್ಕೆ, ಪ್ರಧಾನಿಗೆ ದೂರದೃಷ್ಟಿಯಿದೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!