ಛಲವಾದಿ ನಾರಾಯಣಸ್ವಾಮಿ 
ರಾಜಕೀಯ

ಬೆಂಬಲಿಗರನ್ನು ಮುಂದೆ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅತಿಯಾಯ್ತು, ಇದೇನು ಪ್ರಜಾಪ್ರಭುತ್ವನಾ?: ಖರ್ಗೆ ವಿರುದ್ಧ ಛಲವಾದಿ ನಾರಾಯಣ ಸ್ವಾಮಿ ಕಿಡಿ

ಪ್ರಿಯಾಂಕ್ ಖರ್ಗೆಯವರ ಹೆಸರನ್ನು ತೆಗೆದುಕೊಂಡು ಹೇಳಬಾರದಿತ್ತು. ನಮ್ಮ ನಾಯಕರಾದ ಯಡಿಯೂರಪ್ಪನವರು ಸೂಚಿಸಿದಂತೆ ಆ ಹೆಸರನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ.

ಕಲಬುರಗಿ: ನನ್ನ ಹೇಳಿಕೆಯಲ್ಲಿ ತಪ್ಪಿದ್ದರೆ ಹೋರಾಟ ಮಾಡಲಿ. ಆದರೆ ಈ ರೀತಿ ಬೆಂಬಲಿಗರ ಮುಂದೆ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅತಿಯಾಯ್ತು. ಇದೇನು ಪ್ರಜಾಪ್ರಭುತ್ವನಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಚಿತ್ತಾಪೂರ ಪಟ್ಟಣದ ಪ್ರವಾಸಿ ಮಂದಿರದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆಯವರ ಹೆಸರನ್ನು ತೆಗೆದುಕೊಂಡು ಹೇಳಬಾರದಿತ್ತು. ನಮ್ಮ ನಾಯಕರಾದ ಯಡಿಯೂರಪ್ಪನವರು ಸೂಚಿಸಿದಂತೆ ಆ ಹೆಸರನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆಂದು ಹೇಳಿದ್ದಾರೆ.

ನನ್ನ ಹೇಳಿಕೆಯಲ್ಲಿ ತಪ್ಪಿದ್ದರೆ ಹೋರಾಟ ಮಾಡಲಿ. ಆದರೆ, ಈ ರೀತಿ ಬೆಂಬಲಿಗರ ಮುಂದೆ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅತಿಯಾಯ್ತು. ಇದೇನು ಪ್ರಜಾಪ್ರಭುತ್ವನಾ? ಎಂದು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರಿಯಾಂಕ್ ಖರ್ಗೆ ಯಾವತ್ತೂ ನನ್ನ ವಿರುದ್ಧ ಮಾತನಾಡಿಲ್ವ? ಪ್ರಧಾನಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿಲ್ಲವಾ? ಇವರು ಪ್ರಧಾನಿ ವಿರುದ್ಧ ಮಾತನಾಡುತ್ತಾರೆ. ತಮ್ಮ ವಿರುದ್ಧದ ಟೀಕೆ ಸಹಿಸಿಕೊಳ್ಳೋಕೆ ಆಗಲ್ಲ. ಇವರು ತಮ್ಮನ್ನು ಏನು ಅಂದುಕೊಂಡಿದ್ದಾರೆ? ರಾಜಕೀಯದಲ್ಲಿ ಇದೆಲ್ಲ ಸಹಜ, ಇದಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ನಾನು ಗಾದೆ ಮಾತು ಹೇಳಿದ್ದೇನೆ. ನನ್ನ ಮಾತು ಅಸಂವಿಧಾನಾತ್ಮಕವಾಗಿದ್ದರೆ ಪ್ರಿಯಾಂಕ್ ಖರ್ಗೆ ನಾಳೆಯೇ ನನ್ನ ಮೇಲೆ ಕೇಸ್ ಹಾಕಲಿ. ಸ್ವತಃ ಪ್ರಿಯಾಂಕ್ ಖರ್ಗೆ ಮಾತನಾಡಿ ನಿಮ್ಮ ಹೇಳಿಕೆಯಿಂದ ನನಗೆ ನೋವಾಗಿದೆ ಎಂದಿದ್ದರೆ ನಾನೇ ನನ್ನ ಮಾತು ವಾಪಸ್ ತಗೊಳ್ಳುತ್ತೇನೆ. ಅದು ಬಿಟ್ಟು ಈ ರೀತಿ ಬೆಂಬಲಿಗರನ್ನ ಕಳುಹಿಸಿ ಹೋರಾಟ ಮಾಡಿಸುತ್ತೇನೆಂದರೆ ನಾನು ಇಂಥದಕ್ಕೆಲ್ಲ ಹೆದರೋ ಮಗ ಅಲ್ಲ ಎಂದು ಕಿಡಿಕಾರಿದರು.

ಈ ನಡುವೆ ಛಲವಾದಿ ನಾರಾಯಣಸ್ವಾಮಿಯವರು ವಿಷಾದ ವ್ಯಕ್ತಪಡಿಸಿದ್ದರು, ಕಾಂಗ್ರೆಸ್ ಕಾರ್ಯಕರ್ತರು ಮಾತ್ರ ತಮ್ಮ ಪಟ್ಟು ಬಿಟ್ಟಿಲ್ಲ. ಕ್ಷಮೆ ಕೇಳಿದ್ದು ಸಾಲದು, ನಮ್ಮ ಮುಂದೆ ಖುದ್ದಾಗಿ ಕ್ಷಮೆಯಾಚಿಸಿ ತೆರಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಘಟನೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಛಲವಾದಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ