ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಕೊಟ್ಟ ಜಾಗ ನುಂಗಿದ್ದು ಯಾರು? ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ನಾಯಕ: ಎಚ್.ಡಿ ಕುಮಾರಸ್ವಾಮಿ

ಇವರು ಶಾಶ್ವತವಾಗಿ ಇರುತ್ತಾರಾ? ಮುಂದೆ ಬದಲಾಗಲಿದೆ, ಅದು ನನಗೆ ಗೊತ್ತಿದೆ. ಈಗ ಜಮೀನುಗಳಿಗೆ ಬೆಲೆ ಇಲ್ವಾ? ಅವರ ಜಮೀನುಗಳಿಗೆ ಬೆಲೆ ಏರಬಹುದು.

ನವದೆಹಲಿ: ತಮ್ಮ ತಮ್ಮ ಜಮೀನುಗಳಿಗೆ ಬೆಲೆ ಏರಿಕೆಯಾಗಿರಬಹುದು ಹೀಗಾಗಿ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಮುಂದಾಗಿರಬಹುದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಗಿತ್ತು. ಇದೀಗ ಅವರ (ಡಿಕೆಶಿ) ಜಮೀನುಗಳಿಗೆ ಬೆಲೆ ಏರಿಸಿಕೊಳ್ಳಲು ಹಾಗೆ ಮಾಡಿರಬಹುದು. ಈ ರಾಜಕರಣಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಂದ್ರ ಗೃಹ ಸಚಿವರಿಗೆ ಕಳುಹಿಸಿದ್ದು, ಅವರ ಬಳಿ ಪ್ರಸ್ತಾಪ ತಿರಸ್ಕೃತವಾಗಿದ್ದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇವರು ಶಾಶ್ವತವಾಗಿ ಇರುತ್ತಾರಾ? ಮುಂದೆ ಬದಲಾಗಲಿದೆ, ಅದು ನನಗೆ ಗೊತ್ತಿದೆ. ಈಗ ಜಮೀನುಗಳಿಗೆ ಬೆಲೆ ಇಲ್ವಾ? ಅವರ ಜಮೀನುಗಳಿಗೆ ಬೆಲೆ ಏರಬಹುದು. 40 ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಎಸ್​​ಐಟಿ ಏನೋ ಮಾಡಿದ್ದರಲ್ಲಾ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ನನ್ನ ಮೇಲೆ ಗದಾಪ್ರಹಾರ ಮಾಡ್ತಿದ್ದರಲ್ಲಾ, ಇವರು ಮಾಡಿಕೊಂಡದ್ದರಲ್ಲಿ ಶೇ 50 ಸರ್ಕಾರಿ ಜಮೀನುಗಳಿವೆ. ಇವರು ಮಾಡಿರುವುದು ನಮಗೆ ಗೊತ್ತಿದೆ. ಶಾಂತಿನಗರದ ದಲಿತರ ಜಾಗ ನುಂಗಿದ್ದು ಯಾರು? ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಕೊಟ್ಟ ಜಾಗ ನುಂಗಿದ್ದು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಹಿಂದುಳಿದ ವರ್ಗಗದವರನ್ನು ಗುರಿಯಾಗಿಸಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಸಚಿವ ಪರಮೇಶ್ವರ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್​​ನ ಪ್ರಭಾವಿ ನಾಯಕನೇ ಕಾರಣ‌ ಎಂದರು.

ಸಿಎಂ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿದೆ. ಹೆಣ್ಣು ಮಗಳು ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ. ಪರಮೇಶ್ವರ್ ದಲಿತರ ಸಮಾವೇಶ ಮಾಡಲು ಹೊರಟರು. ತಾವೇ ಮುಂದಿನ ಸಿಎಂ ಆಗುತ್ತೇನೆ ಎಂದು ಸಮಾವೇಶಕ್ಕೆ ಮುಂದಾದರು. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಭಾವಿ ನಾಯಕನೇ ಅವರನ್ನು ಸಿಲುಕಿಸಿದ್ದಾರೆ.

ಇದೆಲ್ಲಾ ಸಿಎಂ ಸಿದ್ದರಾಮಯ್ಯಗೆ ಗೊತ್ತಿಲ್ಲವೇ? ಮುಂದೆ ಸಿಎಂ ಆಗಲು ಟವಲ್ ಹಾಸಿಕೊಂಡು ಇರುವವರೇ ಸಂದೇಶ ನೀಡಿದ್ದಾರೆ. ಈ ಪ್ರಕರಣ ಹೊರಬರಲು ಸಂದೇಶ ನೀಡಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ. ಸಿಎಂ ಹತ್ತಿರ ಗುಪ್ತಚರ ಇಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT