ಬಿ.ವೈ. ವಿಜಯೇಂದ್ರ 
ರಾಜಕೀಯ

'ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ': BYV

ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ.

ಬೆಂಗಳೂರು: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ,ಹಾಗೂ ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ಕಾಂಗ್ರೆಸ್ ಸರಕಾರ ಎದುರು ನೋಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು.

ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಜರಿದಿದ್ದಾರೆ.ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ.

ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತ್ತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಆರೋಪಿಸಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ.

ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ʼಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆʼ ಎಂಬುದನ್ನು ಪ್ರತಿಬಿಂಬಿಸುತ್ತಿದೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT