ಸತೀಶ್ ಜಾರಕಿಹೊಳಿ 
ರಾಜಕೀಯ

ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ; ಆದರೆ 34 ಜನಕ್ಕಷ್ಟೇ ಮಂತ್ರಿಯಾಗಲು ಅವಕಾಶ: ಸತೀಶ್ ಜಾರಕಿಹೊಳಿ

ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್‌ ಹೇಳಿದರೆ ನಾವು ಕೂಡ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಬೆಳಗಾವಿ: ಸಂಪುಟ ಪುನರ ರಚನೆ ಆಗಬೇಕೆಂಬುದು ಚರ್ಚೆಯಲ್ಲಿದೆ. ಆದರೆ ಸಂಪುಟ ಪುನರ್​ರಚನೆ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ. ಆದರೆ ಕೇವಲ 34 ಮಂದಿಗೆ ಮಾತ್ರ ಮಂತ್ರಿಯಾಗಲು ಅವಕಾಶವಿದೆ. ಇನ್ನು ಯಾರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಈ ಸಂಬಂಧ ನನ್ನ ಬಳಿ ಕೇಳಿದರೆ ನಾನೇನು ಹೇಳಲು ಸಾಧ್ಯವಿಲ್ಲ, ಅಧಿಕಾರವೂ ಇಲ್ಲ ಎಂದರು.

ದೆಹಲಿ ಮಟ್ಟದಲ್ಲಿ ಚರ್ಚೆ ಆಗಿದ್ದರೂ ಆಗಿರಬಹುದು. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಬಹಿರಂಗವಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಹೇಳಿದ್ದಾರೆ ಎಂದರು, ಇನ್ನು ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್‌ ಹೇಳಿದರೆ ನಾವು ಕೂಡ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಎಂಎಲ್‌ ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿ, ಯತಿಂದ್ರ ಅವರು ಸಿಎಂ ಸಿದ್ದರಾಮಯ್ಯ ನಂತರ ನಾನು ಅಹಿಂದ ಸಂಘಟನೆಯನ್ನು ಮುನ್ನಡೆಸುತ್ತೇನೆಂದು ಹೇಳಿದ್ದಾರೆ ಅಷ್ಟೇ, ಅದು ನಿಜವೂ ಇದೆ. ಆದರೆ ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಮಾಧ್ಯಮದವರಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!