ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಕಟೌಟ್ ಚಿತ್ರ 
ರಾಜಕೀಯ

ಕೊಪ್ಪಳ: 2028 ರವರೆಗೂ ಸಿದ್ದರಾಮಯ್ಯನೇ ಸಿಎಂ; ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ- ಜಮೀರ್ ಅಹ್ಮದ್ ಖಾನ್

ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನದ ಹುದ್ದೆಗಳು ಖಾಲಿಯಿಲ್ಲ. 2028ರ ತನಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ. ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಆಸೆ ನನ್ನದು ಎಂದರು.

ಕೊಪ್ಪಳ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಹೆಚ್ಚಿನ ಚರ್ಚೆಗೆ ಗ್ರಾಸವಾಗಿರುವಂತೆಯೇ ಸಿಎಂ ಆಪ್ತರೆಂದು ಗುರುತಿಸಿಕೊಂಡಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನದ ಹುದ್ದೆಗಳು ಖಾಲಿಯಿಲ್ಲ. 2028ರ ತನಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ. ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಆಸೆ ನನ್ನದು ಎಂದರು.

ಪಕ್ಷವನ್ನು ಅಧಿಕಾರಕ್ಕೆ ತರಲು ಡಿ.ಕೆ. ಶಿವಕುಮಾರ್ ಅವರ ಪಾತ್ರ ಅತ್ಯಂತ ಮಹತ್ವದ್ದು. ಮುಂದೆ ಅವರು ಸಿಎಂ ಆಗಲಿ ಎಂಬ ಆಸೆ ನನಗೂ ಇದೆ. ಆದರೆ ಈಗ ಸಿಎಂ ಹುದ್ದೆ ಖಾಲಿ ಇಲ್ಲ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ನಿರ್ಧಾರ ಹೈಕಮಾಂಡ್‌ನ ಕೈಯಲ್ಲಿದೆ ಎಂದು ಜಮೀರ್ ಹೇಳಿದರು.

ಶಿವಕುಮಾರ್ ಅಪಾರ ದೈವಭಕ್ತರಾಗಿದ್ದು, ಮೊದಲಿನಿಂದಲೂ ದೇವಸ್ಥಾನಗಳಿಗೆ ಹೋಗುವುದು ಸಾಮಾನ್ಯ. ಅವರು ದೇವಸ್ಥಾನಕ್ಕೆ ಹೋಗುವುದಕ್ಕೂ, ಸಿಎಂ ಸ್ಥಾನದ ಪೈಪೋಟಿ ಅಂತಾ ಹೇಳುವುದಕ್ಕೂ ಸಂಬಂಧವಿಲ್ಲ. ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ. ಇದೆಲ್ಲವೂ ಬಿಜೆಪಿ ಸೃಷ್ಟಿ ಎಂದರು.

ಸಚಿವ ಸತೀಶ ಜಾರಕಿಹೊಳಿ ಅವರ ಇತ್ತೀಚಿನ ದೆಹಲಿ ಪ್ರವಾಸವನ್ನು ‘ದಲಿತ ಸಿಎಂ’ ಕೂಗಿನ ಜೊತೆ ಸಂಬಂಧಿಸಿ ನೋಡುವ ಅಗತ್ಯವಿಲ್ಲ ನಮ್ಮ ಪಕ್ಷದಲ್ಲಿ ಎಲ್ಲ ನಿರ್ಧಾರಗಳೂ ಹೈಕಮಾಂಡ್ ಮಟ್ಟದಲ್ಲೇ ಆಗುತ್ತವೆ. ನಾವು ಶಿಸ್ತುಬದ್ಧ ಪಕ್ಷದವರು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!