ರಾಹುಲ್ ಗಾಂಧಿ ಸುದ್ಧಿಗೋಷ್ಠಿ 
ರಾಜಕೀಯ

ಚುನಾವಣಾ ಆಯೋಗ ಕೇಂದ್ರದ ಜತೆ ಸೇರಿ ಪ್ರಜಾಪ್ರಭುತ್ವದ 'ಕತ್ತು ಹಿಸುಕುತ್ತಿದೆ': ಸಿದ್ದರಾಮಯ್ಯ

ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ.

ಬೆಂಗಳೂರು: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಕರ್ನಾಟಕದಂತೆ ಹರಿಯಾಣ ಚುನಾವಣೆಯಲ್ಲೂ ಮತಕಳ್ಳತನ ನಡೆದಿದೆ. 25 ಲಕ್ಷ ಮತದಾರರು "ನಕಲಿ" ಮತ್ತು ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ "ಮತಗಳ್ಳತನ" ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವನ್ನು ಬಯಲು ಮಾಡಿದ್ದರು. ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳೇ ಸಾಕ್ಷಿ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅವರ ನಿರ್ಲಜ್ಜತನಕ್ಕೆ ಸಾಕ್ಷಿ. ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಗ್ಯಾರಂಟಿ ಎಂದಿದ್ದಾರೆ.

5 ಲಕ್ಷಕ್ಕೂ ಅಧಿಕ ನಕಲಿ ಮತದಾರರು, ತಿರುಚಿದ ಅಥವಾ ಗುರುತಿಸಲು ಸಾಧ್ಯವಾಗದಂತಹ ಫೋಟೊ ಬಳಸಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಹೀಗೆ ಒಟ್ಟು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದೆ. ಅಂದರೆ ಹರಿಯಾಣದಲ್ಲಿ ಮತ ಚಲಾಯಿಸಿದ ಪ್ರತಿ 8 ಜನರ ಪೈಕಿ‌ ಒಂದು ನಕಲಿ‌ ಮತ ಎನ್ನುವುದು ಸ್ಪಷ್ಟವಾಗಿದೆ.

ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದರೂ, ಹರಿಯಾಣದ ಜನ ಈ ಬಾರಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇಬೇಕು ಎಂಬ ದೃಢ ಸಂಕಲ್ಪ ಮಾಡಿದರೂ ಬಿಜೆಪಿ ಹೇಗೆ ಬಹುಮತ ಪಡೆದು ಸರ್ಕಾರ ರಚಿಸಿತು ಎನ್ನುವ ಅನುಮಾನಕ್ಕೆ ರಾಹುಲ್ ಗಾಂಧಿಯವರು ಉತ್ತರ ನೀಡಿದ್ದಾರೆ.

ತಮ್ಮ ಮೇಲಿನ ಆರೋಪಗಳಿಗೆ ಹಾರಿಕೆ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ, ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎಂದು ಅಸಂಬದ್ಧವಾಗಿ ಮಾತನಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಬಾರಿಯಾದರೂ "ತನ್ನ ಮಾಲೀಕರ" ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ ಸತ್ಯ ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕರ್ನಾಟಕದ ಗ್ಯಾರಂಟಿ ಮಾದರಿ' ಗುರುತಿಸಿ, ಹೆಚ್ಚಿನ ಆರ್ಥಿಕ ಬೆಂಬಲ ನೀಡಿ: ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video

SIR ವಿರುದ್ಧ ಕಾನೂನು ಹೋರಾಟಕ್ಕೆ ಕೇರಳ ಸರ್ಕಾರ ನಿರ್ಧಾರ; ಪ್ರತಿಪಕ್ಷಗಳಿಂದಲೂ ಬೆಂಬಲ

ಹರಿಯಾಣದಲ್ಲೂ ಮತಗಳ್ಳತನ: ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

Pakistan: ಜೆಯುಐ ಮುಖ್ಯಸ್ಥ ಮೌಲಾನಾ ಹಫೀಜ್ ಅಬ್ದುಲ್ ಸಲಾಂ ಆರಿಫ್ ಅಪರಿಚಿತರ ಗುಂಡಿಗೆ ಬಲಿ; ಐಎಸ್ಐಗೂ 'ವಾಂಟೆಡ್' ಆಗಿದ್ದ ಧರ್ಮಗುರು! Video

SCROLL FOR NEXT