ರಾಹುಲ್ ಗಾಂಧಿ - ಸಿದ್ದರಾಮಯ್ಯ - ಡಿಕೆ ಶಿವಕುಮಾರ್ 
ರಾಜಕೀಯ

'ಡಿಕೆಶಿಗೆ ನವೆಂಬರ್‌ನಲ್ಲಿ ಸಿಎಂ ಕುರ್ಚಿ ಇಲ್ಲ': ಬಿಜೆಪಿಯ ರಾಹುಲ್-ಸಿದ್ದರಾಮಯ್ಯ ಎಐ ವಿಡಿಯೋ ವೈರಲ್

"ಇದು ಡಿಕೆ ಶಿವಕುಮಾರ್ ಅವರಿಗೆ 'ನೋ ಚೇರ್ ನವೆಂಬರ್' ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಕರ್ನಾಟಕ ಎಐ ವಿಡಿಯೋವನ್ನು ಹಂಚಿಕೊಂಡಿದೆ."

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವುದರ ನಡುವೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಭಾನುವಾರ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಎಕ್ಸ್‌ನಲ್ಲಿ ಎಐ ವಿಡಿಯೋ ಬಿಡುಗಡೆ ಮಾಡಿದ್ದು, ಭಾರಿ ವೈರಲ್ ಆಗಿದೆ.

"ಇದು ಡಿಕೆ ಶಿವಕುಮಾರ್ ಅವರಿಗೆ 'ನೋ ಚೇರ್ ನವೆಂಬರ್'" ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಕರ್ನಾಟಕ ಎಐ ವಿಡಿಯೋವನ್ನು ಹಂಚಿಕೊಂಡಿದೆ."

AI- ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಮೊಬೈಲ್ ನಿಂದ ಡಿಕೆ ಶಿವಕುಮಾರ್ ಅವರಿಗೆ ವಾಟ್ಸಾಪ್‌ನಲ್ಲಿ "ಹಾಯ್" ಕಳುಹಿಸುತ್ತಿರುವುದನ್ನು ತೋರಿಸಲಾಗಿದೆ. ಇದರ ನಂತರ "ಸ್ಕ್ರ್ಯಾಚ್" ಕಾರ್ಡ್ ಬರುತ್ತದೆ.

ಡಿಕೆ ಶಿವಕುಮಾರ್ ಅವರು ಆ ಸ್ಕ್ರ್ಯಾಚ್ ಕಾರ್ಡ್ ಅನ್ನು ಗೀಚುತ್ತಿದ್ದಂತೆ, ಅವರಿಗೆ "ನೋ ಚೇರ್ ನವೆಂಬರ್" ಬಹುಮಾನವಾಗಿ ಸಿಗುತ್ತದೆ. ನಂತರ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ನಗುತ್ತಿರುವುದು ಕಂಡುಬರುತ್ತದೆ.

ಬಿಹಾರ ಚುನಾವಣೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಂಪುಟ ಪುನರ್ರಚನೆ ಕುರಿತು ಚರ್ಚಿಸುವುದಾಗಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

"ಬಿಹಾರ ಚುನಾವಣೆಯ ನಂತರ ರಾಹುಲ್ ಗಾಂಧಿ ಮತ್ತು ಖರ್ಗೆ ಅವರೊಂದಿಗೆ ಸಂಪುಟ ಪುನರ್ರಚನೆ ಕುರಿತು ಚರ್ಚಿಸುತ್ತೇನೆ... ಜನರು ಏನು ಬೇಕಾದರೂ ಹೇಳಬಹುದು. ಹೈಕಮಾಂಡ್ ಯಾರು? ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಏನಾದರೂ ಹೇಳಿದ್ದಾರೆಯೇ? ಜನರಿಗಿಂತ ಹೆಚ್ಚಾಗಿ, ಮಾಧ್ಯಮಗಳು ಇದರ ಬಗ್ಗೆ ಚರ್ಚಿಸುತ್ತಿವೆ. ಹೈಕಮಾಂಡ್ ಹೊರತುಪಡಿಸಿ, ಇತರರು ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ" ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್