ಪ್ರಿಯಾಂಕ್ ಖರ್ಗೆ 
ರಾಜಕೀಯ

'RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ'

ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಆರ್‌ಎಸ್‌ಎಸ್ ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಮತ್ತು ತನ್ನ 100 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಅನುಮತಿ ಪಡೆಯುವ ಮೂಲಕ ನೆಲದ ಕಾನೂನನ್ನು ಅನುಸರಿಸಿ ಪಥ ಸಂಚಲನ ನಡೆಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಹೇಳಿದ್ದಾರೆ.

ತಮ್ಮ ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಆರ್ ಎಸ್ಎಸ್ ಪಥ ಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ನವೆಂಬರ್ 16 ರಂದು 300 ಜನ ಮತ್ತು 50 ಸದಸ್ಯರ ಬ್ಯಾಂಡ್‌ನೊಂದಿಗೆ ರೂಟ್ ಮಾರ್ಚ್ ನಡೆಸುವಂತೆ ಸೂಚಿಸಲಾಗಿದೆ.

ಹೈಕೋರ್ಟ್ ಅನುಮತಿ ನಂತರ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಖ್ ಖರ್ಗೆ ಅವರು, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ, ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್ ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ಟೀಕಿಸಿದ್ದಾರೆ.

ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು. ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ ಎಂದು ಎಚ್ಚರಿಸಿದ್ದಾರೆ.

ಪಥ ಸಂಚಲನದಲ್ಲಿ 300 ಜನರು ಮಾತ್ರ ಭಾಗವಹಿಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಪಥ ಸಂಚಲನ ನಡೆಸಬೇಕು. ಚಿತ್ತಾಪುರದಲ್ಲಿ ಹೊರಗಿನವರು ಭಾಗಿಯಾಗುವಂತಿಲ್ಲ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ ಎಂದು ಹೇಳಿದ್ದಾರೆ.

ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು - Video

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!

ಬಾಗಲಕೋಟೆ: ಕಟ್ಟೆ ಹೊಡೆದ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು; 100ಕ್ಕೂ ಹೆಚ್ಚು ಟ್ರಾಲಿಗಳಿಗೆ ಬೆಂಕಿ, Video!

SCROLL FOR NEXT