ಸಿಎಂ ಸಿದ್ದರಾಮಯ್ಯ 
ರಾಜಕೀಯ

ಬಿಹಾರ ಚುನಾವಣಾ ಫಲಿತಾಂಶ: ಕಾಂಗ್ರೆಸ್​​ಗೆ ಭಾರೀ ಮುಖಭಂಗ; ಸೋಲು ಖಚಿತವಾಗುತ್ತಿದ್ದಂತೆ ವೋಟ್ ಚೋರಿ ಎಂದ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತನಾಡುತ್ತೇನೆ.

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್​​ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್​ಜೆಡಿ ಹಾಗೂ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ.

ಈ ನಡುವೆ ಬಿಹಾರದ ಸಂಪೂರ್ಣ ಫಲಿತಾಂಶ ಹೊರ ಬೀಳುವ ಮುನ್ನವೇ ಕಾಂಗ್ರೆಸ್​ ನಾಯಕರು ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಬಿಹಾರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಯಲ್ಲಿ ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತನಾಡುತ್ತೇನೆಂದು ಹೇಳಿದರು.

ಯಾಕೆ ಜನ ವೋಟ್ ಹಾಕಿಲ್ಲ, NDA ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನುವುದು ಗೊತ್ತಿಲ್ಲ. ಇಲ್ಲೂ ಮತಗಳ್ಳತನವಾಗಿದೆ. ಆದರೆ ನಾವು ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಜೆಂಡಾ ಓಬಿಸಿ ಅವರೇ ಬಿಹಾರದಲ್ಲಿ ಕೈ ಹಿಡಿದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ನಿತೀಶ್ ಕುಮಾರ್ ಯಾರು? ಅವರು ಓಬಿಸಿ ಅಲ್ಲವಾ? ಸಿಡಿಮಿಡಿಗೊಂಡರು,

ಮುಧೋಳದಲ್ಲಿ ರೈತರ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಬೇರೆ ಎಲ್ಲಾ ರೈತರು 3,300 ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿಕೊಂಡಿದ್ದಾರೆ. ಆದರೆ, ಮುಧೋಳ ರೈತರು ಮಾತ್ರ ಒಪ್ಪಿಕೊಂಡಿಲ್ಲ. ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಯಾರು ಕಬ್ಬು, ಟ್ರ್ಯಾಕ್ಟರ್, ಟ್ರಾಲಿಗಳನ್ನ ಸುಟ್ಟಿ ಹಾಕಿದ್ದಾರೆ ಅಂತ ವಿಚಾರಣೆ ಮಾಡಿಸೋಣ. ರೈತರು ನಾವು ಸುಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ವಿಚಾರಣೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ: ಅದೃಷ್ಟವಶಾತ್‌ 68 ಪ್ರಯಾಣಿಕರು ಪಾರು..!

SCROLL FOR NEXT