ಡಿ.ಕೆ ಶಿವಕುಮಾರ್ 
ರಾಜಕೀಯ

ನನ್ನ ಮಾನಸಿಕ, ದೈಹಿಕ ಆರೋಗ್ಯ ಸರಿಯಾಗಿದೆ: ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ- ಬ್ಲಾಕ್ ಮೇಲ್ ಮಾಡುವವನು ನಾನಲ್ಲ; ಡಿ.ಕೆ. ಶಿವಕುಮಾರ್

ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ.

ಬೆಂಗಳೂರು: ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ.

ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗುತ್ತಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, "ಅದೆಲ್ಲಾ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿರುವೆ.

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಶಂಕುಸ್ಥಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು.

ಕಾಂಗ್ರೆಸ್ ಕಚೇರಿ ನಿರ್ಮಾಣದ ಕಟ್ಟಡ ನಕ್ಷೆ ಅನುಮೋದನೆಗೆ ನಾನು ₹2.30 ಕೋಟಿ ಹಣವನ್ನು ಪಾವತಿಸುತ್ತಿದ್ದೇನೆ. ರಾಮಲಿಂಗಾರೆಡ್ಡಿ ಅವರ ಮುಂದಾಳತ್ವದಲ್ಲಿ ಒಂದು ಕಚೇರಿ ನಿರ್ಮಿಸಲಾಗುತ್ತಿದೆ. 75-80 ಕಡೆ ಕಚೇರಿ ನಿರ್ಮಾಣಕ್ಕೆ ಜಾಗ ಕೂಡ ಸಿದ್ಧವಾಗಿವೆ. ನೂರು ಕಚೇರಿ ನಿರ್ಮಾಣ ಕಾರ್ಯ ಮಾಡುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 42 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

ವಾರ ಭವಿಷ್ಯ: ದ್ವಾದಶ ರಾಶಿಗಳ ಫಲಾಫಲ

ಮೊಹಮ್ಮದ್ ಶಮಿ ವಾಪಸ್ ಕರೆ ತನ್ನಿ: ಕೋಲ್ಕತ್ತಾ ಟೆಸ್ಟ್ ಸೋಲಿನ ನಂತರ ಗೌತಮ್ ಗಂಭೀರ್‌ಗೆ ಗಂಗೂಲಿ!

SCROLL FOR NEXT