ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಚರ್ಚೆಗಳು ನಡೆದರೆ, ಅದನ್ನು ಡಿಕೆ.ಶಿವಕುಮಾರ್ ಅವರನ್ನೇ ಕೇಳಬೇಕು. ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮುಂದುವರಿಸಲು ಬಯಸಿದರೆ, ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ.

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರ ಬಳಿಯೆ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗುರುವಾರ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಚರ್ಚೆಗಳು ನಡೆದರೆ, ಅದನ್ನು ಡಿಕೆ.ಶಿವಕುಮಾರ್ ಅವರನ್ನೇ ಕೇಳಬೇಕು. ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮುಂದುವರಿಸಲು ಬಯಸಿದರೆ, ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ, ಇಲ್ಲದಿದ್ದರೆ ಇಲ್ಲ ಎಂದು ಹೇಳಿದರು.

ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ಕಾರ್ಯನಿರ್ವಹಿಸಿದ್ದಾರೆ. ಯಾರಿಗೂ ಗೊತ್ತು ಶಿವಕುಮಾರ್ ಅವರು ಎಂಟು ವರ್ಷ ಒಂದು ದಿನದವರೆಗೆ ಅಧ್ಯಕ್ಷರಾಗಿರಬಹುದು ಎಂದು ತಿಳಿಸಿದರು.

ನವೆಂಬರ್ ಕ್ರಾಂತಿ ಬಗ್ಗೆ ನಮ್ಮ ಪಕ್ಷದ ಕೆಲವು ನಾಯಕರು, ಮುಖಂಡರು ಹೇಳಿಕೆಗಳನ್ನು ಕೊಡುತ್ತಿದ್ದರು. ನಾಳೆ ನ.21ನೇ ತಾರೀಖು ಆಗಲಿದೆ. ಆದರೆ, ಯಾವ ನವೆಂಬರ್ ಕ್ರಾಂತಿಯೂ ನಮಗೆ ಕಾಣಿಸುತ್ತಿಲ್ಲ ಎಂದರು.

ರಾಜ್ಯದಲ್ಲಿ ನಾಯಕತ್ವದ ಕುರಿತು ಈಗಾಗಲೆ ಹಲವು ಬಾರಿ ಮಾತನಾಡಿದ್ದೇನೆ. ಪುನಃ ಅದೇ ವಿಚಾರ ಪ್ರಸ್ತಾವಿಸಲು ನನಗೆ ಇಷ್ಟ ಇಲ್ಲ. ನಾಯಕತ್ವದ ವಿಚಾರದಲ್ಲಿ ಯಾರೋ ನೀಡುವ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದು ಸೂಕ್ತವಲ್ಲ. ಇಂದಿಗೆ ಸರಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದ್ದೇವೆ. ಮುಂದೆಯೂ ಉತ್ತಮ ಆಡಳಿತ ನೀಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT