ಡಿ.ಕೆ.ಶಿವಕುಮಾರ್ 
ರಾಜಕೀಯ

ಸಿದ್ದರಾಮಯ್ಯ CM ಆಗಿ ಇರಲ್ಲ ಎಂದು ಯಾರೂ ಹೇಳಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಪರಿಷತ್ ಸಭಾಧ್ಯಕ್ಷರು ಹಾಗೂ ಉಪ ಸಭಾಧ್ಯಕ್ಷರನ್ನು ಈ ಬಾರಿ ಕಾಂಗ್ರೆಸ್ ಪಕ್ಷದಿಂದಲೇ ಆಯ್ಕೆ ಮಾಡಬೇಕು ಎಂದು ಪಕ್ಷದ ಸದಸ್ಯರುಗಳು ಮನವಿ ಮಾಡಿದ್ದಾರೆ. ಈ ಹಿಂದೆಯೇ ಇದನ್ನು ಮಾಡಬೇಕಿತ್ತು. ಮೇಲ್ಮನೆಯಲ್ಲಿ ವಿಪಕ್ಷಗಳ ಹಾಗೂ ನಮ್ಮ ಸಂಖ್ಯೆ ಸಮನಾಗಿದೆ

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

ಸದಾಶಿವನಗರದ ನಿವಾಸದ ಬಳಿ ಗುರುವಾರ ರಾತ್ರಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಐದೂ ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಕೇಳಿದಾಗ ಬಹಳ ಸಂತೋಷ, ಅವರಿಗೆ ಮುಖ್ಯಮಂತ್ರಿ ಹುದ್ದೆ ಜವಾಬ್ದಾರಿಯನ್ನು ಪಕ್ಷ ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ" ಎಂದರು.

ವಿಧಾನಪರಿಷತ್ ಸಭಾಧ್ಯಕ್ಷರು ಹಾಗೂ ಉಪ ಸಭಾಧ್ಯಕ್ಷರನ್ನು ಈ ಬಾರಿ ಕಾಂಗ್ರೆಸ್ ಪಕ್ಷದಿಂದಲೇ ಆಯ್ಕೆ ಮಾಡಬೇಕು ಎಂದು ಪಕ್ಷದ ಸದಸ್ಯರುಗಳು ಮನವಿ ಮಾಡಿದ್ದಾರೆ. ಈ ಹಿಂದೆಯೇ ಇದನ್ನು ಮಾಡಬೇಕಿತ್ತು. ಮೇಲ್ಮನೆಯಲ್ಲಿ ವಿಪಕ್ಷಗಳ ಹಾಗೂ ನಮ್ಮ ಸಂಖ್ಯೆ ಸಮನಾಗಿದೆ. ಗಾಯತ್ರಿ ಅವರ ಪ್ರಕರಣವನ್ನು ನ್ಯಾಯಲಯದಲ್ಲಿ ಗೆದ್ದಿದ್ದೇವೆ. ಅಲ್ಲಿಂದ ಆದೇಶ ಪಡೆಯಬೇಕಿದೆ. ಆಗ ನಮ್ಮ ಸದಸ್ಯರ‌ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಸದಸ್ಯರು ತಿಳಿಸಿದ್ದಾರೆ" ಎಂದರು.

ಸಚಿವರು, ಶಾಸಕರು, ಎಂಎಲ್ ಸಿಗಳ ದೆಹಲಿ ಭೇಟಿ ಬಗ್ಗೆ ಗೊತ್ತಿಲ್ಲ. ಯಾರೂ ನನ್ನ ಬಳಿ ಕೇಳಿಯೂ ಇಲ್ಲ. ಈ ವಿಚಾರ ನನಗೆ ಗೊತ್ತೂ ಇಲ್ಲ ಎಂದರು. ಸರ್ಕಾರಕ್ಕೆ ಎರಡುವರೆ ವರ್ಷ ಪೂರೈಸಿದ ದಿನವೇ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, "ನನಗೆ ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ಮನೆಯಿಂದ ಹೊರಗಡೆ ಬಂದಿಲ್ಲ. ಸ್ನಾನವನ್ನೂ ಮಾಡಿಲ್ಲ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಎರಡೂವರೆ ವರ್ಷಗಳ ಕಾಂಗ್ರೆಸ್ ಆಡಳಿತ ಕನ್ನಡಿಗರಿಗೆ ಕೊಟ್ಟಿದ್ದು ಕೇವಲ ದೌರ್ಭಾಗ್ಯಗಳನ್ನ: ಆರ್.ಅಶೋಕ್

SCROLL FOR NEXT