ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಕ್ಷದ ಶಾಸಕರು ಮತ್ತು ನಾಯಕರಿಗೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಹೇಳಿಕೆಗಳನ್ನು ನೀಡದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ರಾಜ್ಯ ಸಚಿವರೊಬ್ಬರು ಮತ್ತು ಹಲವಾರು ಶಾಸಕರು ದೆಹಲಿಗೆ ಪ್ರಯಾಣ ಬೆಳೆಸಿದ ಒಂದು ದಿನದ ನಂತರ ಎಐಸಿಸಿ ಈ ಎಚ್ಚರಿಕೆ ನೀಡಿದೆ.
"ನಿರ್ಣಾಯಕವಾಗಿ ಸೋಲು ಮತ್ತು ಬಣ ರಾಜಕಾರಣದಿಂದ ತುಂಬಿರುವ" ಬಿಜೆಪಿ, ಮಾಧ್ಯಮದ ಒಂದು ಭಾಗವು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಚರ್ಚೆ ನಡೆಸಲಾಗಿದ್ದು, ಅಪಪ್ರಚಾರದ ಬಗ್ಗೆ ಅವರು ಒಪ್ಪಿಕೊಂಡಿದ್ದಾರೆ ಎಂದು ಸುರ್ಜೇವಾಲಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಭಿವೃದ್ಧಿ, ಸರ್ಕಾರದ ಭರವಸೆ ದುರ್ಬಲಗೊಳಿಸುವುದು ಬಿಜೆಪಿಯ ಉದ್ದೇಶವಾಗಿದೆ. ಕೆಲವು ಕಾಂಗ್ರೆಸ್ ನಾಯಕರು ಮತ್ತು ಶಾಸಕರ ಅನಗತ್ಯ ಹೇಳಿಕೆಗಳು ಸಹ ಊಹಾಪೋಹಗಳಿಗೆ ಕಾರಣವಾಗಿದೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಎಂದು ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.