ಪರಮೇಶ್ವರ್, ಡಿಕೆ ಶಿವಕುಮಾರ್  
ರಾಜಕೀಯ

ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ: ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್!

ಮುಖ್ಯಮಂತ್ರಿ ಆಕಾಂಕ್ಷೆಗಳ ಬಗ್ಗೆ ಯಾರಾದರೂ ನನ್ನನ್ನು ಕೇಳಿದಾಗ, ನಾನು ಸ್ವಾಭಾವಿಕವಾಗಿಯೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದೇನೆ ಎಂದು ಉತ್ತರಿಸುತ್ತೇನೆ. ಆದರೆ ಅಧಿಕಾರ ಪರಿವರ್ತನೆಯಾಗಿ ಡಿಕೆಶಿ ಮುಖ್ಯಮಂತ್ರಿಯಾದರೆ, ನಾವು ಅದನ್ನು ಸ್ವೀಕರಿಸುತ್ತೇನೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗೆ ವಲಯದಲ್ಲಿ ಕಾಣಿಸಿಕೊಳ್ಳುವ ಅಲ್ಲದೆ ಭವಿಷ್ಯದಲ್ಲಿ ಸಿಎಂ ಸ್ಥಾನದ ಆಕಾಂಕ್ಷಿ ಎಂದೂ ಪರಿಗಣಿಸಲಾಗುವ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಇದೀಗ ಡಿಕೆ ಶಿವಕುಮಾರ್‌ ಬೆಂಬಲಕ್ಕೆ ನಿಂತಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುವುದಾಗಿ ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಆಕಾಂಕ್ಷೆಗಳ ಬಗ್ಗೆ ಯಾರಾದರೂ ನನ್ನನ್ನು ಕೇಳಿದಾಗ, ನಾನು ಸ್ವಾಭಾವಿಕವಾಗಿಯೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದೇನೆ ಎಂದು ಉತ್ತರಿಸುತ್ತೇನೆ. ಆದರೆ ಅಧಿಕಾರ ಪರಿವರ್ತನೆಯಾಗಿ ಡಿಕೆಶಿ ಮುಖ್ಯಮಂತ್ರಿಯಾದರೆ, ನಾವು ಅದನ್ನು ಸ್ವೀಕರಿಸುತ್ತೇವೆ" ಎಂದು ಪರಮೇಶ್ವರ ಹೇಳಿದರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪಕ್ಷವು ಅನುಮೋದಿಸಿದರೆ ಯಾವುದೇ ಪರಿವರ್ತನೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ ಹೇಳಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ "ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ" ಎಂದು ಡಾ.ಜಿ.ಪರಮೇಶ್ವರ ಹೇಳಿದರು. ಆದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಸ್ತಾಂತರದ ಯಾವುದೇ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT