ರಮ್ಯಾ-ಡಿಕೆ ಶಿವಕುಮಾರ್-ಸಿದ್ದರಾಮಯ್ಯ 
ರಾಜಕೀಯ

ರಾಜಕೀಯ ಅಂದ್ರೆ ಅದು...: ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಮಾಜಿ ಸಂಸದೆ ರಮ್ಯಾ ಶಾಕಿಂಗ್ ಹೇಳಿಕೆ

ಅಧಿಕಾರಿ ಹಂಚಿಕೆ ವಿಚಾರ ದಿನೇ ದಿನೇ ಕಗ್ಗಂಟಾಗುತ್ತಾ ಹೋಗುತ್ತಿದೆ. ಉಭಯದ ಬಣದ ಬೆಂಬಲಿಗರು ದಿನಕ್ಕೊಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಇದೇ ವಿಚಾರವಾಗಿ ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು: ಅಧಿಕಾರಿ ಹಂಚಿಕೆ ವಿಚಾರ ದಿನೇ ದಿನೇ ಕಗ್ಗಂಟಾಗುತ್ತಾ ಹೋಗುತ್ತಿದೆ. ಉಭಯದ ಬಣದ ಬೆಂಬಲಿಗರು ದಿನಕ್ಕೊಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಇದೇ ವಿಚಾರವಾಗಿ ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಇದನ್ನ ನಾನು ನಿರ್ಧಾರ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಎಂದು ರಮ್ಯಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ರಂತ ದೊಡ್ಡ ದೊಡ್ಡ ನಾಯಕರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ಪಕ್ಷದಲ್ಲಿ ಗೊಂದಲ ಹೆಚ್ಚಾಗಿದೆ ಯಾಕೆ ಎಂದು ಕೇಳಿದ್ದಕ್ಕೆ ಅದೇ ರಾಜಕೀಯ ಎಂದು ನಕ್ಕು, ಎಲ್ಲಾ ನಾಯಕರಿಗೂ ಅರ್ಹತೆ ಇದೆ. ಯಾರಾದಾರೂ ನನಗೆ ಅಭ್ಯಂತರವಿಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ಕರೆಯುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್