ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

'ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್

ಪಕ್ಷದ ವರಿಷ್ಠರು ನನಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಎದ್ದಿರುವ ಭಿನ್ನಮತ ಇಂದು ಶನಿವಾರ ಅಂತಿಮ ಘಟ್ಟಕ್ಕೆ ತಲುಪುವ ಸಾಧ್ಯತೆಯಿದೆ. ಇದು ಕಾಂಗ್ರೆಸ್ ಹೈಕಮ್ಯಾಂಡ್‌ಗೂ ದೊಡ್ಡ ತಲೆನೋವಾಗಿದೆ. ಅಂತಿಮವಾಗಿ ಈ ಕುರ್ಚಿ ಕದನದಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸಿದ್ದು. ಡಿಸಿಎಂ ಡಿಕೆಶಿ ಅವರನ್ನು ತಮ್ಮ ನಿವಾಸಕ್ಕೆ ಕರೆದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ನಿನ್ನೆ ಸೂಚಿಸಿದ್ದಾರೆ. ಅದರಂತೆ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಅವರನ್ನು ತಮ್ಮ ಕಾವೇರಿ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿದ್ದಾರೆ.

ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ

ಬ್ರೇಕ್ ಫಾಸ್ಟ್​ ಮೀಟಿಂಗ್​​ ಗೂ ಮುನ್ನವೇ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ.

ಪಕ್ಷದ ವರಿಷ್ಠರು ನನಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಅಂದರೆ ಪರೋಕ್ಷವಾಗಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸಾಧ್ಯತೆ ಬಹುತೇಕ ನಿರ್ಣಯವಾಗಿದೆ ಎನ್ನಬಹುದು.

ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್‌, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​ಗೆ ದೂರವಾಣಿ ಕರೆ ಮಾಡಿದ್ದು, ಇಬ್ಬರೂ ಮಾತುಕತೆ ಮೂಲಕ ಗೊಂದಲ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಪರಸ್ಪರ ಮಾತುಕತೆ ಮಾಡಿ ನಿರ್ಣಯವನ್ನು ತಮಗೆ ತಿಳಿಸಿ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಇಂದು ಸಂಜೆಯ ದೆಹಲಿ ಪ್ರವಾಸ ರದ್ದು ಮಾಡಿದ್ದು, ಹೈಕಮಾಂಡ್ ಸೂಚನೆಯಂತೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ಕರೆ ಮಾಡಿ ನಾಳೆ ಬೆಳಗ್ಗೆ ಬ್ರೇಕ್ ಫಾಸ್ಟ್​​ಗೆ ಬರುವುದಾಗಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಮತ್ತು ಡಿಸಿಎಂ ಅವರೇ ಗೊಂದಲ ಬಗೆಹರಿಸಿಕೊಂಡು ಸಂಧಾನಕ್ಕೆ ಬರುತ್ತಾರೋ ಅಥವಾ ಮತ್ತೆ ದೆಹಲಿ ಹೈಕಮಾಂಡ್ ನತ್ತ ಮುಖ ಮಾಡುತ್ತಾರೋ ಎಂಬುದನ್ನು ಕಾದುನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ತಬ್ಬಿಬ್ಬಾದ ಪ್ರಿಯಾಂಕಾ ವಾದ್ರಾ, Video

ವಿಧಾನಸಭೆಗೆ ಆಗಸ್ಟ್ 14 ರಂದು ಹೊಸ ಸ್ಪೀಕರ್ ಆಯ್ಕೆ