ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಎರಡು ಬಾರಿ ಅಧಿಕಾರ ಹೋದಾಗ ನಾನು ಯಾವುದೇ ಮಠಾಧೀಶರ ನೆರವು ಕೇಳಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ಟಾಂಗ್; Video

ಒಕ್ಕಲಿಗ ಸಮಾಜ, ಇನ್ನೊಂದು ಸಮಾಜದ ಬಗ್ಗೆ ಹೇಳಲ್ಲ. ನಾನು ಹೇಳೋದು ಸಮಾಜದಲ್ಲಿ ಈ ರೀತಿ ಜಾತಿ ವಿಚಾರ ಹೇಳಿಕೊಂಡು, ಧಾರ್ಮಿಕ ಕ್ಷೇತ್ರಗಳನ್ನು ದುರುಪಯೋಗ ಮಾಡಿಕೊಳ್ಳುವುದು ರಾಜಕಾರಣಿಗಳಿಗೆ ಶೋಭೆ ತರಲ್ಲ ಎಂದರು.

ಬೆಂಗಳೂರು: ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ, ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸ್ವಾಮೀಜಿಗಳ ಬೆಂಬಲ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಎರಡು ಬಾರಿ ಸಿಎಂ ಆದೆ. ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ. ಒಕ್ಕಲಿಗ ಸಮಾಜ, ಇನ್ನೊಂದು ಸಮಾಜದ ಬಗ್ಗೆ ಹೇಳಲ್ಲ. ನಾನು ಹೇಳೋದು ಸಮಾಜದಲ್ಲಿ ಈ ರೀತಿ ಜಾತಿ ವಿಚಾರ ಹೇಳಿಕೊಂಡು, ಧಾರ್ಮಿಕ ಕ್ಷೇತ್ರಗಳನ್ನು ದುರುಪಯೋಗ ಮಾಡಿಕೊಳ್ಳುವುದು ಯಾವುದೇ ರಾಜಕಾರಣಿಗಳಿಗೆ ಶೋಭೆ ತರಲ್ಲ ಎಂದರು.

ಸ್ವಾಮೀಜಿಗಳು ಸೇರಿ ಎಲ್ಲರಿಗೂ ಹೇಳುತ್ತೇನೆ. ಇಲ್ಲಿ ಪ್ರಶ್ನೆ ರಾಜ್ಯ ನೆಮ್ಮದಿಯಿಂದ ಇರಬೇಕು. ಜಾತಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿ, ಈಗ ಬೃಹದಾಕಾರದ ಜಾತಿ ರಾಜಕಾರಣ ಮಾಡಲಾಗುತ್ತಿದೆ. ಇದರಿಂದ ನಷ್ಟ ಅವ್ರಿಗೆ ಅಲ್ಲ. ರಾಜ್ಯಕ್ಕೆ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಅಲ್ಲ. ಕರ್ನಾಟಕದ ಜನತೆಗೆ ಮುಜುಗರ" ಎಂದು ವಾಗ್ದಾಳಿ ನಡೆಸಿದರು.

ಜವಾಬ್ದಾರಿಯುತ ವ್ಯಕ್ತಿ ಅದಕ್ಕೆ ಉತ್ತರ ನೀಡಬೇಕು. ಸಿಎಂ ಡಿಸಿಎಂ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ. ಡ್ರಾಮಾ ನಡೆಯುತ್ತಿದೆ. ಡ್ರಾಮಾದ ಫಲಿತಾಂಶಕ್ಕೆ ನಾವು ಕಾಯ್ತಾ ಇದ್ದೇವೆ. ಯಾವ ಸರ್ಕಾರದ ಬಗ್ಗೆ ಮಾತಾಡ್ತಾ ಇದ್ದೀರಾ? ಕಾಂಗ್ರೆಸ್ ಪಕ್ಷದ ಸರ್ಕಾರ ಅಲ್ಲ ಇದು. ಕರ್ನಾಟಕದಲ್ಲಿ ಪಕ್ಷದ ಸಂಘಟನೆ ಮಾಡುವ ಬಗ್ಗೆ ಚರ್ಚೆ ಅವರಿಗೆ ಬಿಟ್ಟಿದ್ದು. ನಾಡಿನ ಜನತೆ 140 ಸ್ಥಾನ ಕೊಟ್ಟು ಒಳ್ಳೆಯ ಕೆಲಸ ಮಾಡಿ ಅಧಿಕಾರ ಕೊಟ್ಟರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

SCROLL FOR NEXT