ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್: ಜೋಡೆತ್ತುಗಳು ಒಗ್ಗಟ್ಟು ಪ್ರದರ್ಶಿಸಿದರೂ ಇನ್ನೂ ಮುಗಿದಿಲ್ಲ ಕುರ್ಚಿ ಕದನ; ಹೈಕಮಾಂಡ್ ಅಂಗಳದಲ್ಲಿ ಚೆಂಡು..!

ಇಂದು ದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಭಾಗವಹಿಸುವ ಸಾಧ್ಯತೆಯಿದೆ. ಸಭೆಯಲ್ಲಿ ಕರ್ನಾಟಕದ ವಿಷಯದ ಕುರಿತಂತೆಯೂ ಚರ್ಚೆಗಳು ನಡೆಯುವ ಸಾಧ್ಯತೆಯಿದೆ.

ಸಿಎಂ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ — online desk
Manjula VN
Updated On : 30 Nov 2025, 8:33 am

ಬೆಂಗಳೂರು: ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಒಗ್ಗಟ್ಟು ಪ್ರದರ್ಶಿಸುವ ಪ್ರಯತ್ನ ಮಾಡಿದ್ದರೂ ಕುರ್ಚಿ ಕದನ ಇನ್ನೂ ಮುಗಿಲ್ಲ. ಬ್ರೇಕ್ ಫಾಸ್ಟ್ ಮೀಟಿಂಗ್ ಕೇವಲ ತಾತ್ಕಾಲಿಕ ಶಾಂತಿ ಮೂಡಿಸುವ ಯತ್ನದಂತೆ ಕಾಣುತ್ತಿದ್ದು, ಪಕ್ಷದ ಹೈಕಮಾಂಡ್ ಶಾಶ್ವತ ಪರಿಹಾರ ಕೈಗೊಂಡಾಗ ಕುರ್ಚಿ ಕದನದ ಬಿಸಿ ಏರಿಕೆಯಾಗುವ ಸಾಧ್ಯತೆಗಳಿವೆ.

ನಿನ್ನೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು, ಈ ಸಭೆಯ ಫಲಿತಾಂಶವನ್ನು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿರುವ ಮಾತುಕತೆ ನಡೆಸಿದ್ದು, ಈ ವೇಳೆ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಶರತ್ ಬಚ್ಚೇಗೌಡ ಕೂಡ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.

Advertisement

Advertisement

ಇಂದು ದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಭಾಗವಹಿಸುವ ಸಾಧ್ಯತೆಯಿದೆ. ಸಭೆಯಲ್ಲಿ ಕರ್ನಾಟಕದ ವಿಷಯದ ಕುರಿತಂತೆಯೂ ಚರ್ಚೆಗಳು ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅಗತ್ಯವಿದ್ದರೆ ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಇಬ್ಬರನ್ನೂ ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Also Read

ಅಧಿಕಾರ ಹಂಚಿಕೆ ವಿಚಾರ: 'ಕೊಟ್ಟ ಮಾತು' ಕುರಿತ ಪ್ರಶ್ನೆಗೆ ಮಾಧ್ಯಮಗಳ ಮೇಲೆ ಸಿಎಂ ಸಿಡಿಮಿಡಿ; Video

ಉಪಾಹಾರ ಸೇವಿಸಿದ ನಂತರ ಸುಮಾರು 40 ನಿಮಿಷಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಏಕಪಕ್ಷೀಯ ಮಾತುಕತೆ ನಡೆಸಿದ ಡಿಕೆ.ಶಿವಕುಮಾರ್ ಅವರು, ರಾಹುಲ್ ಗಾಂಧಿಯವರ ಮಾತಿಗೆ ಬದ್ಧ ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ನಡೆಸಿದ ಉಪಹಾರ ಸಭೆ ವೇಳೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕೂಡ ಹಾಜರಿದ್ದರು.

ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಫೋನ್‌ ಕರೆ ಮಾಡಿದ್ದು, ಸಿದ್ದರಾಮಯ್ಯ ಅವರೊಂದಿಗೂ ಮಾತನಾಡಿ ಉಪಾಹಾರ ಸಭೆ ನಡೆಸುವಂತೆ ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರ ಬಳಿ ಮೊಬೈಲ್ ಫೋನ್ ಇಲ್ಲದ ಕಾರಣ ಸಿದ್ದರಾಮಯ್ಯ ಸುತ್ತಲೂ ಇರುವ ಪೊನ್ನಣ್ಣ ಅವರನ್ನೇ ವೇಣುಗೋಪಾಲ್ ಅವರು ಸಂಪರ್ಕಿಸಿ, ಮಾತುಕತೆ ನಡೆಸಿದ್ದರು.

ಗುರುವಾರ ನಡೆದ ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿಯೂ ಡಿಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಪೊನ್ನಣ್ಣ ಅವರಿಗೆ ಸಿಎಂ ಅವರೊಂದಿಗೆ ಮಾತನಾಡಲು ಸೂಚಿಸಿ, ಕೊಟ್ಟ ಮಾತಿಗೆ ತಕ್ಕಂತೆ ಬದ್ಧರಾಗಿರುವಂತೆ ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement