ಮಂಡ್ಯ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್ನಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಂಬಿಕೆ ನಮಗಿದೆ,. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಸಿಎಂ ಆಗಲಿದ್ದಾರೆ ನಮ್ಮ ಆಶಯ ಕೂಡ ಅದೇ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದ್ದಾರೆ.
ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಅಗಬೇಕು ಎಂಬುದೇ ನಮ್ಮ ಇಚ್ಛೆ ಎಂದು ಶಿವರಾಮೇಗೌಡ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಏನೇ ಬೆಳವಣಿಗೆ ಆಗುವುದಿದ್ದರೂ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ. ಆದರೆ, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಹಳೆ ಮೈಸೂರು ಭಾಗದವರಾದ ನಮ್ಮೆಲ್ಲರ ಇಚ್ಛೆ. ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ,
ನಮಗೆ ತಿಳಿದ ಮಟ್ಟಿಗೆ ಹೈಕಮಾಂಡ್ ಮಟ್ಟದಲ್ಲಿ ಎರಡೂವರೆ ವರ್ಷ ಸಿಎಂ ಅಧಿಕಾರ ಹಂಚಿಕೆ ಒಪ್ಪಂದವಾಗಿದೆ, ಎರಡೂವರೆ ವರ್ಷ ಸಿದ್ದರಾಮಯ್ಯನವರು ಮತ್ತು ಎರಡೂವರೆ ವರ್ಷ ಡಿ ಕೆ ಶಿವಕುಮಾರ್ ಎಂದು ಮಾತುಕತೆಯಾಗಿದೆ ಎಂದು ನಮಗೆ ಮಾಹಿತಿ ಸಿಕ್ಕಿದೆ ಎಂದರು.