ಡಿ ಕೆ ಶಿವಕುಮಾರ್  
ರಾಜಕೀಯ

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

ಇದಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಕಾಂಗ್ರೆಸ್​ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ನಲ್ಲಿ ದಸರಾ ಹಬ್ಬದ ಮಧ್ಯೆ ಮತ್ತೆ ಪವರ್ ಶೇರಿಂಗ್​​​ ಚರ್ಚೆ ಮುನ್ನಲೆಗೆ ಬಂದಿದೆ. ನವೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಕ್ರಾಂತಿಯಾಗುತ್ತದೆ ಎಂಬ ಮಾತುಗಳನ್ನು ರಾಜಕೀಯ ನಾಯಕರೇ ಹೇಳುತ್ತಿದ್ದಾರೆ. ಕೆಲ ಕಾಂಗ್ರೆಸ್​​ ನಾಯಕರು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಕಾಂಗ್ರೆಸ್​ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದಿದ್ದಾರೆ.

ಕುಣಿಗಲ್ ಶಾಸಕ ರಂಗನಾಥ್​ಗೆ ನೋಟಿಸ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಯಾರಿಗೂ ಪವರ್ ಶೇರಿಂಗ್ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ ರಂಗನಾಥ್ ಸೇರಿದಂತೆ ಯಾರು ಸಹ ಮಾತನಾಡಬಾರದು. ಅವರಿಗೆ ನೋಟಿಸ್ ಕೊಡಲು ಹೇಳಿದ್ದೇನೆ ಎಂದರು.

ಪವರ್ ಶೇರಿಂಗ್ ಬಗ್ಗೆ ಎಲ್ಲಿ ಚರ್ಚೆ ಇದೆ? ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ, ಯಾರು ಚರ್ಚೆ ಮಾಡಬಾರದು. ಇದರ ಬಗ್ಗೆ ಮಾತನಾಡುವವರು ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪರವಾಗಿ ಮಾತಾಡಿದರೂ, ನನ್ನ ಪರವಾಗಿ ಮಾತಾಡಿದರೂ ಅದು ಡ್ಯಾಮೇಜ್ ಆಗುತ್ತೆ. ಇದರ ಬಗ್ಗೆ ಚರ್ಚೆ ಮಾಡಿದರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದಂತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಬೇರೆ ರೀತಿ ಹೇಳಿದ್ದಾರೆ, ಅವರು ಹೇಳಿದಂತೆ ಹೈಕಮಾಂಡ್ ಮಾತೇ ಅಂತಿಮ. ಹೈಕಮಾಂಡ್​ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ನಮಗೆ ಪಕ್ಷ ಮುಖ್ಯ, ವ್ಯಕ್ತಿಯಲ್ಲ. ಪಕ್ಷ ಹೇಳಿದಂತೆ ಕೇಳಿಕೊಂಡು ಹೋಗುತ್ತೇವೆ ಎಂದರು.

ಬಿಜೆಪಿ ಪಕ್ಷದರು ಅವರ ಪಾರ್ಟಿಯ ಕ್ರಾಂತಿಯ ಬಗ್ಗೆ ಚರ್ಚೆ ಮಾಡಿಕೊಂಡು ಹೋಗಲಿ. ನಾನು ಸೂಜಿ, ದಾರ ಬೇಕಾದರೆ ಕಳಿಸಿಕೊಡುತ್ತೇನೆ ಅವರು ಹೊಲೆದುಕೊಂಡು ಅವರ ಪಕ್ಷವನ್ನು ರೆಡಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

RSS @100: ಪ್ರಚಾರಕರಾಗಿ ಸಂಘ ಸೇರಿದ ಕೇರಳದ ಮಾಜಿ ಪೊಲೀಸ್ ಮುಖ್ಯಸ್ಥ Jacob Thomas

'ಪಾಕಿಸ್ತಾನ ಪ್ರಧಾನಿ ಕೊಟ್ಟಿದ್ದ 25 ಲಕ್ಷ ರೂ ಚೆಕ್ ಕೂಡ ಬೌನ್ಸ್..!', ಕ್ರಿಕೆಟಿಗ Saeed Ajmal ವಿಡಿಯೋ ವೈರಲ್!

1st Test: ಇತಿಹಾಸ ಬರೆದ Jasprit Bumrah, ಕನ್ನಡಿಗ Javagal Srinath ಹಳೇ ದಾಖಲೆ ಕೊನೆಗೂ ಪತನ!

SCROLL FOR NEXT