ಸಿದ್ದರಾಮಯ್ಯ 
ರಾಜಕೀಯ

ನಮ್ಮ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು BJP ಯಾರು? ಅವರೇನು ಕಾಂಗ್ರೆಸ್ ಹೈಕಮಾಂಡಾ?: ಸಿದ್ದರಾಮಯ್ಯ ತಿರುಗೇಟು; Video

ನಮ್ಮ ಬಗ್ಗೆ ಏಕೆ ಬಿಜೆಪಿ ತಲೆಕೆಡಿಸಿಕೊಳ್ಳುತ್ತಿದೆ? ಅವರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬದಲು ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ. ನಮ್ಮ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಲು ಅವರು ಯಾರು?

ಬೆಳಗಾವಿ: ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು ಅವರು ಯಾರು? ಅವರೇನು ನಮ್ಮ ಹೈಕಮಾಂಡಾ? ಅವರ ಕೆಲಸ ಅವರು ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಿರುಗೇಟು ನೀಡಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪದೇ ಪದೆ ನಾನೇ ಸಿಎಂ ಎನ್ನುವ ಮೂಲಕ ಸಿದ್ದರಾಮಯ್ಯ ಹೈಕಮಾಂಡ್​​ಗೆ ಸೆಡ್ಡು ಹೊಡೆದಿದ್ದಾರೆ ಎಂಬ ವಿಧಾನ ಪರಿಷತ್​ ಸದಸ್ಯ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ನಮ್ಮ ಬಗ್ಗೆ ಏಕೆ ಬಿಜೆಪಿ ತಲೆಕೆಡಿಸಿಕೊಳ್ಳುತ್ತಿದೆ? ಅವರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬದಲು ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುತ್ತಿದ್ದಾರೆ. ನಮ್ಮ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಲು ಅವರು ಯಾರು? ಎಂದು ಪ್ರಶ್ನಿಸಿದರು.

ಇದೇ ವೇಳೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಕೇಂದ್ರದ ಎನ್‌ಡಿಆರ್‌ಎಫ್ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಮುಖ್ಯಮಂತ್ರಿಗಳು ನಿರಾಕರಿಸಿದರು.

ಎನ್‌ಡಿಆರ್‌ಎಫ್ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಒಂದು ರೂಪಾಯಿಯನ್ನೂ ದುರುಪಯೋಗಪಡಿಸಿಕೊಂಡಿಲ್ಲ. ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ಈ ಯೋಜನೆಗಳು ಕರ್ನಾಟಕದಲ್ಲಿ ಭಾರಿ ಯಶಸ್ಸನ್ನು ಕಂಡಿವೆ, ಅದು ಅವರ ನಿದ್ದೆಗೆಡಿಸಿದೆ ಎಂದು ಹೇಳಿದರು.

ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ, ಇಂದು ನಾನೆ ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ನಾವು ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಿದ್ದೇವೆ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

'India MY Matrubhumi', ಜೈ ಶ್ರೀರಾಮ್ , ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!

ಸಂಭಾಲ್ ಮಸೀದಿ ನೆಲಸಮಕ್ಕೆ ತಡೆ ನೀಡಲು ಅಲಹಾಬಾದ್ ಹೈಕೋರ್ಟ್ ನಕಾರ

'ತಂಡದ ಹಿತಾಸಕ್ತಿಯೇ ಮುಖ್ಯ': ನಾಯಕತ್ವದಿಂದ ರೋಹಿತ್ ಶರ್ಮಾಗೆ ಕೊಕ್, ಕೊನೆಗೂ ಮೌನ ಮುರಿದ BCCI ಹೇಳಿದ್ದೇನು?

SCROLL FOR NEXT