ರಣದೀಪ್ ಸಿಂಗ್ ಸುರ್ಜೇವಾಲಾ 
ರಾಜಕೀಯ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಟೀಕಿಸಲು BJP ದೇವೇಗೌಡರನ್ನು ಕಣಕ್ಕಿಳಿಸಿದೆ: ಸುರ್ಜೇವಾಲಾ ಟೀಕೆ

ಗ್ಯಾರಂಟಿ ಯೋಜನೆಗಳಿಗಾಗಿಯೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 97 ಸಾವಿರ ಕೋಟಿ ರೂ. ಹಣವನ್ನು ವ್ಯಯಿಸುತ್ತಿರುವಾಗ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡಲು ಸಾಧ್ಯ?

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಲು ಬಿಜೆಪಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಕಣಕ್ಕಿಳಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ಶನಿವಾರ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ 'ಕುರುಡು ದೃಷ್ಟಿಯುಳ್ಳ ಪಕ್ಷಗಳು ನಾಚಿಕೆಪಡಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಸಾಮಾಜಿಕ ನ್ಯಾಯ ಎತ್ತಿ ಹಿಡಿದು, ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿವೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ದೇವೇಗೌಡರ ಹೇಳಿಕೆ ಬಿಜೆಪಿ-ಜೆಡಿಎಸ್‌ ದ್ವೇಷ ರಾಜಕಾರಣಕ್ಕೆ ಒಂದು ಉದಾಹರಣೆ. ಎರಡೂ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು ಎಂದು ಟೀಕಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿಯೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 97 ಸಾವಿರ ಕೋಟಿ ರೂ. ಹಣವನ್ನು ವ್ಯಯಿಸುತ್ತಿರುವಾಗ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡಲು ಸಾಧ್ಯ? ಸಾಮಾಜಿಕ ನ್ಯಾಯದ ಉದ್ದೇಶವನ್ನು ಹತ್ತಿಕ್ಕುವ ಮೂಲಕ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಬಿಜೆಪಿ-ಜೆಡಿಎಸ್ ಬಯಸುತ್ತಿವೆ. ಇಂತಹ ದುಷ್ಟ ಪ್ರಯತ್ನವನ್ನು ಸಫಲವಾಗಲು ಕಾಂಗ್ರೆಸ್‌ ಬಿಡುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ, ಯುಪಿ, ಇತರ ರಾಜ್ಯಗಳಲ್ಲಿ SIR ವಿರುದ್ಧ ಹೊಸ ಅರ್ಜಿ: EC ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

'ಕೈ ಇಟ್ಟಲೆಲ್ಲಾ ದುಡ್ಡೋ ದುಡ್ಡು..': ಕರ್ನಾಟಕದಿಂದ ಕೇರಳಕ್ಕೆ ಹಣ ಕಳ್ಳಸಾಗಣೆ, 3.15 ಕೋಟಿ ರೂ. ನಗದು ಕಸ್ಟಮ್ಸ್ ವಶಕ್ಕೆ! Video

ಕೇರಳ: ಮದುವೆ ದಿನವೇ ಅಪಘಾತ, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಆಸ್ಪತ್ರೆಯಲ್ಲಿಯೇ ತಾಳಿ ಕಟ್ಟಿದ ವರ!

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 6 ಸಾವು, ಕೋಲ್ಕತಾ ಸೇರಿ ಭಾರತದ ಹಲವೆಡೆ ಕಂಪಿಸಿದ ಭೂಮಿ, Video

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

SCROLL FOR NEXT