ಬೆಂಗಳೂರು: 2023 ರಲ್ಲಿ ಅಧಿಕಾರಿಂದ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತಲೇ ಇದ್ದು, ಇದು ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರಿದೆ ಎಂದು ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ಅವರು ಕಿಡಿಕಾರಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ. ಆದರೆ, ನಾಯಕತ್ವ ಬದಲಾವಣೆ ವಿಚಾರದಿಂದ ಅಸ್ಪಸಂಖ್ಯಾ ಸರ್ಕಾರಕ್ಕೆ ವರ್ತಿಸುತ್ತಿದೆ. ಇದು ರಾಜ್ಯದ ಆಡಳಿತ ಮೇಲೆ ಸಂಪೂರ್ಣ ಪರಿಣಾಮ ಬೀರಿದೆ. ಬೆಂಗಳೂರಿನ ಹದಗೆಟ್ಟ ರಸ್ತೆಗಳಿಂದಲೇ ಇದೂ ತಿಳಿಯುತ್ತದೆ ಎಂದು ಟೀಕಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್'ನ್ನು ಟೀಕಿಸಿರುವ ಅವರು, ಕಾಂಗ್ರೆಸ್ ಹೈಕಮಾಂಡ್ ಹಣಕ್ಕಾಗಿ ಕರ್ನಾಟಕವನ್ನು ಅವಲಂಬಿಸಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳಿಗಾಗಿ ಸ್ಥಾಪಿಸಲಾಗಿರುವ ನಿಗಮದಲ್ಲಿ ಹಣ ಪಡೆದಿದ್ದರು. ಇದು ದೊಡ್ಡ ಹಗರಣಕ್ಕೆ ಕಾರಣವಾಯಿತು ಎಂದು ಎಲ್ಲರಿಗೂ ತಿಳಿದಿದೆ. 2025 ರ ಬಿಹಾರ ಚುನಾವಣೆಯ ಸಮಯದಲ್ಲೂ ಇದೇ ರೀತಿಯ ಪಿತೂರಿಗಳು ನಡೆಯುತ್ತದೆಯೇ ಎಂಬುದನ್ನು ನೋಡಬೇಕಿದೆ ಎಂದು ಹೇಳಿದ್ದಾರೆ.
ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಗಳ ಪರಿಸ್ಥಿತಿ, ಜನರ ನೋವಿನತ್ತ ಗಮನಹರಿಸಬೇಕಿದೆ. ಸರ್ಕಾರವು ಆಡಳಿತ ಮತ್ತು ಅಧಿಕಾರಿಗಳ ಮೇಲೆ ಹೇಗೆ ಹಿಡಿತ ಕಳೆದುಕೊಂಡಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.