ಸಿದ್ದರಾಮಯ್ಯ  
ರಾಜಕೀಯ

ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಹಿಂದೆ ರಾಜಕೀಯ ಉದ್ದೇಶವಿದೆಯೇ? ಸಂಪುಟ ಸಹೋದ್ಯೋಗಿಗಳು ಹೇಳಿದ್ದೇನು?

ಸಂಪುಟ ಪುನಾರಚನೆ ಮಾಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಆದರೆ ಈ ವಿಷಯವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 13, ಸೋಮವಾರ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಔತಣಕೂಟಕ್ಕೆ ಆಹ್ವಾನಿಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಸಂಪುಟ ಪುನಾರಚನೆ ಬಗ್ಗೆ ತೀವ್ರ ಉತ್ಸುಕರಾಗಿರುವ ಸಿದ್ದರಾಮಯ್ಯನವರ ಆಪ್ತ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಈ ವಿಷಯ ಔತಣಕೂಟ ವೇಳೆ ಚರ್ಚೆಗೆ ಬರಬಹುದು ಎಂದು ಭಾವಿಸಿದ್ದಾರೆ. ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

ಜಮೀರ್ ಏನೆಂದರು?

ಸಂಪುಟ ಪುನಾರಚನೆ ಮಾಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಆದರೆ ಈ ವಿಷಯವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಲಾಗಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆಯಾಗುತ್ತದೆಯೇ ಎಂದು ಗೊತ್ತಿಲ್ಲ. ಸಿಎಂ ಔತಣಕೂಟಕ್ಕೆ ಕರೆದಿದ್ದಾರೆ, ಏನು ಚರ್ಚಿಸಲಾಗುತ್ತದೆ ಎಂದು ಕಾದು ನೋಡೋಣ ಎಂದು ಅವರು ಸುದ್ದಿಗಾರರಿಗೆ ಹೇಳಿದ್ದಾರೆ.

ಸಚಿವ ಮಹದೇವಪ್ಪ ಹೇಳಿದ್ದೇನು?

ಸಮಾಜ ಕಲ್ಯಾಣ ಸಚಿವ ಡಾ. ಹೆಚ್ .ಸಿ. ಮಹದೇವಪ್ಪ ಅವರು, ಸಚಿವರ ಬದಲಾವಣೆಯಾಗಲಿ, ಸಂಪುಟ ಪುನಾರಚನೆಯಾಗಲಿ ಅಥವಾ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸೇರ್ಪಡೆಗೊಳಿಸುವುದಾಗಲಿ, ಯಾವಾಗ ನಿರ್ಧಾರ ತೆಗೆದುಕೊಳ್ಳಬೇಕೆಂದು ಹೈಕಮಾಂಡ್‌ಗೆ ತಿಳಿದಿದೆ ಎಂದು ಹೇಳಿದರು.

ಗೃಹ ಸಚಿವರು, ಸಂತೋಷ್ ಲಾಡ್ ಏನೆಂದರು?

ಸಚಿವರ ಮೌಲ್ಯಮಾಪನ ನಿರಂತರ ಪ್ರಕ್ರಿಯೆಯಾಗಿದ್ದು, ಸಂಪುಟ ಪುನಾರಚನೆಯನ್ನು ಮುಖ್ಯಮಂತ್ರಿಯವರ ಔತಣಕೂಟದ ಜೊತೆ ಹೋಲಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಉಡುಪಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಮುಖ್ಯಮಂತ್ರಿಗಳು ಪ್ರತಿ ವರ್ಷ ಔತಣಕೂಟವನ್ನು ಕರೆಯುತ್ತಾರೆ. ಇದು ಹೊಸದೇನಲ್ಲ. ಕಳೆದ ಬಾರಿಯೂ ಇದನ್ನು ಕರೆಯಲಾಗಿತ್ತು. ಮುಖ್ಯಮಂತ್ರಿಗಳು ವೈಯಕ್ತಿಕವಾಗಿ ಮಾತನಾಡುತ್ತಾರೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಾಮಾನ್ಯ ವಿದ್ಯಮಾನ. ಅದು ಯಾವಾಗ ಆಗಬೇಕೆಂದು ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ನಿರ್ಧರಿಸುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಮೊಬೈಲ್ ಪಾಸ್‌ವರ್ಡ್ ನಿನ್ನ ಹೆಂಡ್ತಿಗೆ ಕೊಡ್ತೀಯಾ? ಖಬರಸ್ಥಾನ ಆಸ್ತಿ ಬೇರೆಯವರಿಗೆ ವರ್ಗಾವಣೆಯಾಗಿದ್ದು ಹೇಗೆ; ಸಂಸದ ನಾಸೀರ್ ಹುಸೇನ್

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1,600 ಹುದ್ದೆ ಶೀಘ್ರವೇ ಭರ್ತಿ: ಜಿ. ಪರಮೇಶ್ವರ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

SCROLL FOR NEXT