ಆರ್. ಅಶೋಕ್ ಮತ್ತು ಛಲವಾದಿ ನಾರಾಯಣ ಸ್ವಾಮಿ 
ರಾಜಕೀಯ

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM-DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬಹುದು?

ಬೆಟ್ಟಿಂಗ್‌ ಹಗರಣದಲ್ಲಿ ಸಿಕ್ಕಿ ಬಿದ್ದಿರುವ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಬಿಹಾರ ಚುನಾವಣೆಗಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ 300 ಕೋಟಿ ಕೊಟ್ಟು ಮಂತ್ರಿ ಸ್ಥಾನಗಿಟ್ಟಿಸಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ಬಿಹಾರ ಚುನಾವಣೆಗೆ ಹಣ ಸಂಗ್ರಹಿಸಲು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಆರೋಪಿಸಿವೆ.

ಬೆಟ್ಟಿಂಗ್‌ ಹಗರಣದಲ್ಲಿ ಸಿಕ್ಕಿ ಬಿದ್ದಿರುವ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಬಿಹಾರ ಚುನಾವಣೆಗಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ 300 ಕೋಟಿ ಕೊಟ್ಟು ಮಂತ್ರಿ ಸ್ಥಾನಗಿಟ್ಟಿಸಲು ಪ್ರಯತ್ನಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ರಾಹುಲ್‌ಗಾಂಧಿ ಅವರ ಪಾಲಿಗೆ ಎಟಿಎಂ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದ್ದಾರೆ.

ವೀರೇಂದ್ರ ಕರ್ಮಕಾಂಡ ನೋಡುತ್ತಿದ್ದರೆ ಇನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್‌ಗೆ ಕಪ್ಪ ನೀಡುತ್ತಿರಬಹುದು ನೀವೇ ಊಹಿಸಿಕೊಳ್ಳಿ ಎಂದು ಹೇಳಿದ್ದಾರೆ.

ವೀರೇಂದ್ರ ಅವರನ್ನು ಸಚಿವರನ್ನಾಗಿ ಮಾಡಲು ಪಕ್ಷ ಒಪ್ಪಿಕೊಂಡ ನಂತರ ಬಿಹಾರ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ನಾಯಕರು 300 ಕೋಟಿ ರೂ.ಗಳನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ ಎಂದು ಪರಿಷತ್ತಿನ ಎಲ್‌ಒಪಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ದಾಳಿಯ ಸಮಯದಲ್ಲಿ ಇಡಿ ಸುಮಾರು 400 ಕೋಟಿ ರೂ.ಗಳ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದರು. ವೀರೇಂದ್ರ ಮಾತ್ರವಲ್ಲ, ಕಾಂಗ್ರೆಸ್‌ನಲ್ಲಿ ನೂರಾರು ಕುಟುಂಬಗಳು ಭ್ರಷ್ಟಾಚಾರದಲ್ಲಿ ತೊಡಗಿವೆ ಎಂದು ಅವರು ಹೇಳಿದರು.

ಜೂಜಾಟ ಮತ್ತು ಬೆಟ್ಟಿಂಗ್‌ನಂತಹ ಕಾನೂನುಬಾಹಿರ ವಿಧಾನಗಳಿಂದ ಹಣ ಸಂಪಾದಿಸಿ ಚುನಾವಣೆಗಳನ್ನು ಗೆಲ್ಲುತ್ತಾರೆ, ಮಂತ್ರಿಯಾಗಲು ಅದನ್ನು ಬಳಸುತ್ತಾರೆ ಎಂದು ಅವರು ಹೇಳಿದರು. ತೆಲಂಗಾಣ ಚುನಾವಣೆ ಮತ್ತು ಲೋಕಸಭಾ ಚುನಾವಣೆಗಳಿಗಾಗಿ, ವಾಲ್ಮೀಕಿ ನಿಗಮದ ಹಣವನ್ನು ಒಳಗೊಂಡಂತೆ ಸಾವಿರಾರು ಕೋಟಿಗಳನ್ನು ಲೂಟಿ ಮಾಡಲಾಗಿದೆ ಮತ್ತು ಈಗ, ಬಿಹಾರ ಚುನಾವಣೆಗೆ ಕನ್ನಡಿಗರ ತೆರಿಗೆ ಹಣವನ್ನು ಎಷ್ಟು ಲೂಟಿ ಮಾಡಲಾಗುತ್ತದೆ ಎಂದು ಯಾರಿಗೆ ತಿಳಿದಿದೆ ಎಂದು ಅಶೋಕ ಪ್ರಶ್ನಸಿದ್ದಾರೆ. ಚುನಾವಣೆಗಾಗಿ ಇಂತಹ ಕಳಂಕಿತ ಹಣವನ್ನು ಬಳಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಪ್ರಕ್ರಿಯೆಯ ಬಗ್ಗೆ ಮಾತನಾಡಲು ಯಾವುದೇ ನೈತಿಕ ಅಧಿಕಾರವಿಲ್ಲ ಎಂದು ಅಶೋಕ ಹೇಳಿದರು.

ಸಾಮಾಜಿಕ ಮಾಧ್ಯಮ ವೇದಿಕೆ X ಗೆ ಪ್ರತಿಕ್ರಿಯಿಸಿದ ಜೆಡಿಎಸ್, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ತನ್ನ ಎಟಿಎಂ ಆಗಿ ಮಾಡಿಕೊಂಡಿದೆ ಮತ್ತು ಮಂತ್ರಿಗಳನ್ನು ಮಾಡುವ ಭರವಸೆ ನೀಡುವ ಮೂಲಕ ಬಿಹಾರ ಚುನಾವಣೆಗೆ ತನ್ನ ನಾಯಕರಿಂದ ಹಣವನ್ನು ಸಂಗ್ರಹಿಸಲು ಪ್ರಾರಂಭಿಸಿದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT