ಸಿದ್ದರಾಮಯ್ಯ - ಆರ್ ಅಶೋಕ್ 
ರಾಜಕೀಯ

ಸಾಕು ನಿಮ್ಮ ದುರಾಡಳಿತ, ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ: ಸಿದ್ದರಾಮಯ್ಯಗೆ ಆರ್.ಅಶೋಕ್

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.

ಬೆಂಗಳೂರು: ಇನ್ನೆಷ್ಟು ದಿನ ಈ ಭಂಡ ಬಾಳು ಸಿದ್ದರಾಮಯ್ಯನವರೇ? ಸಾಕು ನಿಮ್ಮ ದುರಾಡಳಿತ. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಕುರಿತ ಆರ್.ವಿ.ದೇಶಪಾಂಡೆ ಹೇಳಿಕೆ ಕುರಿತು ಅಶೋಕ್ ಅವರು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಹೇಳಿದ್ದಾರೆ.

ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎನ್ನುವ ಹಪಹಪಿಯಿಂದ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಈಗ ಗ್ಯಾರೆಂಟಿಗಳು ಬಿಸಿ ತುಪ್ಪವಾಗಿದೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದೆ ಎನ್ನುವ ಕೂಗು ಕಾಂಗ್ರೆಸ್ ಪಕ್ಷದಲ್ಲೇ ಏಳುತ್ತಿದ್ದು ಈ ಹಿಂದೆ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರೇ "ಸರ್ಕಾರದ ಬಳಿ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ" ಎಂದು ಒಪ್ಪಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು "ರಸ್ತೆ ಬೇಕು ಅಂದರೆ ಗ್ಯಾರೆಂಟಿ ಸ್ಕೀಮ್ ಬಂದ್ ಮಾಡಬೇಕಾಗುತ್ತದೆ" ಎಂದು ಹೇಳಿದ್ದರು.

ಈಗ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರು, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ ಅವರು "ನಾನು ಮುಖ್ಯಮಂತ್ರಿ ಆಗಿದ್ದರೆ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರಲಿಲ್ಲ" ಎಂದು ಹೇಳಿರುವುದು ಸಿಎಂ ಸಿದ್ದರಾಮಯ್ಯ ಅವರು ಎಷ್ಟು ಅಸಮರ್ಥ ಮುಖ್ಯಮಂತ್ರಿ ಎನ್ನುವುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಇನ್ನೆಷ್ಟು ದಿನ ಈ ಭಂಡ ಬಾಳು ಸಿದ್ದರಾಮಯ್ಯನವರೇ? ಸಾಕು ನಿಮ್ಮ ದುರಾಡಳಿತ. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್, ಯುದ್ಧ ಅಂತ್ಯ ಎಂದು ಟ್ರಂಪ್ ಘೋಷಣೆ

'ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಅಸಾಧ್ಯ: ಜಮೀರ್‌ನ ಬಿಳಿ ಟೋಪಿ ಸಾಬಣ್ಣ ಅಂತ ಕರಿತೀರಾ?'

ಸಮೀಕ್ಷೆಗೆ ಸಿಬ್ಬಂದಿ ನಿಯೋಜನೆ: ತುರ್ತು ಪರಿಸ್ಥಿತಿ ನಿಭಾಯಿಸುವುದೇ ಸವಾಲು: ಗ್ರೆಟರ್ ಬೆಂಗಳೂರು ಪ್ರಾಧಿಕಾರ

Tamil Nadu: ವಿಷಯುಕ್ತ 'ಕೋಲ್ಡ್ರಿಫ್' ಸಿರಫ್ : ಸ್ರೆಸನ್ ಫಾರ್ಮಾ ಕಂಪನಿಯ ಲೈಸನ್ಸ್ ರದ್ದುಗೊಳಿಸಿ, ಬಾಗಿಲು ಮುಚ್ಚಿಸಿದ ಸ್ಟಾಲಿನ್ ಸರ್ಕಾರ!

SCROLL FOR NEXT