ಬಿಜೆಪಿ (ಸಂಗ್ರಹ ಚಿತ್ರ) online desk
ರಾಜಕೀಯ

ನ.2ಕ್ಕೆ ಚಿತ್ತಾಪುರ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟವರಿಗೆ ಮುಖಭಂಗವಾಗಿದೆ; BJP

ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ.

ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ ಎಂದು ಬಿಜೆಪಿ ಭಾನುವಾರ ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ. ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದ್ದಾರೆ.

ಚಿತ್ತಾಪುರದಲ್ಲಿ ಆರ್'ಎಸ್ಎಸ್ ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ.

ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಸಿರುಗಟ್ಟಿಸಲು ಹೋದರೆ ದೇಶದ ಸಂವಿಧಾನ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಸಂದೇಶ ಇಂದಿನ ತೀರ್ಪಿನ ಮೂಲಕ ರವಾನೆಯಾಗಿದೆ, ರಾಷ್ಟ್ರಭಕ್ತ ಸಂಘಟನೆಗಳನ್ನು ಮೆಟ್ಟಿ ನಿಲ್ಲುವ ಕಾಂಗ್ರೆಸ್ ನ ಕುಟಿಲ ನೀತಿಯು ನ್ಯಾಯಾಲಯದ ತೀರ್ಪಿನಿಂದ ನಿಷ್ಕ್ರಿಯಗೊಂಡಂತಾಗಿದೆ ಎಂದು ತಿಳಿಸಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಚಿತ್ತಾಪುರದಲ್ಲಿ ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಗೆ ತಹಸೀಲ್ದಾರರ ಮೂಲಕ 12 ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿಲ್ಲವೆಂದು ಅನುಮತಿ ನಿರಾಕರಿಸಿರುವ ಪರಿ ಉತ್ತರ ಕೋರಿಯಾದ ತಿಕ್ಕಲು ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಆಡಳಿತ ವೈಖರಿಯನ್ನು ನೆನಪಿಸುತ್ತಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಕರಾಳ ಇತಿಹಾಸ ಅತ್ಯಂತ ಪ್ರಿಯವಾಗಿರುವಂತಿದೆ, ಈ ಕಾರಣಕ್ಕಾಗಿಯೇ ಕಲಬುರಗಿ ಜಿಲ್ಲೆಯಲ್ಲಿ ತುರ್ತುಪರಿಸ್ಥಿತಿ ನೆನಪಿಸುವ ರೀತಿಯ ಆಡಳಿತವನ್ನು ಜಾರಿಗೆ ತರಲು ಹೊರಟಿದ್ದಾರೆ, ಇದಕ್ಕಾಗಿ ಚಿತ್ತಾಪುರವನ್ನು ಚಿಮ್ಮುವ ಹಲಗೆಯಂತೆ ಪ್ರಯೋಗಿಸುತ್ತಿದ್ದಾರೆ.

ಡಾ.ಬಾಬಾ ಸಾಹೇಬ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ ರೀತಿಯಲ್ಲಿ ಚಿತ್ತಾಪುರದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣ ಮಾಡಿದ್ದಾರೆ. ಆರ್'ಎಸ್ಎಸ್ ಪಥಸಂಚಲನ ಹಾಗೂ ಕಾರ್ಯಕ್ರಮದ ಅನುಮತಿಗೆ ವಿಧಿಸಿರುವ ಷರತ್ತುಗಳನ್ನು ರಾಜ್ಯಕ್ಕೆ ಅನ್ವಯಿಸಿ ಬಿಟ್ಟರೆ ಕರ್ನಾಟಕದ ಯಾವುದೇ ಮೂಲೆಗಳಲ್ಲೂ ಯಾವುದೇ ಸಾಂಸ್ಕೃತಿಕ ಹಾಗೂ ರಾಷ್ಟ್ರಭಕ್ತಿಯ ಕಾರ್ಯಕ್ರಮಗಳನ್ನು ನಡೆಸಲು ಆಸ್ಪದವೇ ಇಲ್ಲದಂಥ ಪರಿಸ್ಥಿತಿ ನಿರ್ಮಾಣವಾಗಲಿದೆ.ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ಆಡಳಿತ ಹೇರಲು ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸುತ್ತಿದೆ ಅದಕ್ಕೆ ಚಿತ್ತಾಪುರವನ್ನು ಪ್ರಯೋಗಾಲಯ ಮಾಡಿಕೊಂಡಿದೆ.

ಚಿತ್ತಾಪುರದಲ್ಲಿ ಸದ್ಯ ಆರಂಭವಾಗಿರುವುದು ಸರ್ವಾಧಿಕಾರಿ ಆಡಳಿತ V/S ಪ್ರಜಾಪ್ರಭುತ್ವದ ನಡುವಿನ ಸಮರ” ಇದನ್ನು ಸವಾಲಾಗಿ ಸ್ವೀಕರಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಾರ್ಟಿ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲು ನಿವಾಸದ ಹೊರಗೆ ಹೈಡ್ರಾಮ: 'ನನ್ನ ಕಥೆ ಮುಗಿಯಿತು' ಬಟ್ಟೆ ಹರಿದುಕೊಂಡು ಗೋಳಾಡಿದ RJD ಟಿಕೆಟ್ ಆಕಾಂಕ್ಷಿ! Video

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

ಚಿತ್ತಾಪುರದಲ್ಲಿ ನ.2ಕ್ಕೆ RSS ಪಥಸಂಚಲನಕ್ಕೆ ಅನುಮತಿ; ಅ.24ಕ್ಕೆ ಅರ್ಜಿ ವಿಚಾರಣೆ: ಹೈಕೋರ್ಟ್ ಮಹತ್ವದ ಸೂಚನೆ

ಜನ್ಮದಿನದಂದು Gabru ಸಿನಿಮಾ ಘೋಷಿಸಿದ ಸನ್ನಿ ಡಿಯೋಲ್; ಫಸ್ಟ್ ಲುಕ್ ಬಿಡುಗಡೆ!

Afghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯ

SCROLL FOR NEXT