ಪ್ರಿಯಾಂಕ್ ಖರ್ಗೆ 
ರಾಜಕೀಯ

'ಕರ್ನಾಟಕದ ಸಂಪನ್ಮೂಲಗಳನ್ನು ಹೈಕಮಾಂಡ್‌ಗೆ ಅರ್ಪಿಸಿದ ಕೀರ್ತಿ ಬಿಜೆಪಿಗೆ ಸಲ್ಲಬೇಕು, ಕಾಂಗ್ರೆಸ್‌ಗೆ ಅಲ್ಲ': ಪ್ರಿಯಾಂಕ್ ಖರ್ಗೆ

ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಬರೆದಿದ್ದಾರೆ.

ಬೆಂಗಳೂರು: ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಸಚಿವರು ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಬಿಜೆಪಿಯನ್ನು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಸಂಪನ್ಮೂಲಗಳನ್ನು 'ಹೈಕಮಾಂಡ್‌ಗೆ ತಿರುಗಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ' ಮತ್ತು 'ಕಾಂಗ್ರೆಸ್‌ಗೆ ಅಲ್ಲ' ಎಂದು ಮಂಗಳವಾರ ಹೇಳಿದ್ದಾರೆ.

'ಎಕ್ಸ್'ನಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, 'ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ' ಎಂದಿದ್ದಾರೆ.

ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಬರೆದಿದ್ದಾರೆ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು ಎಂದಿದ್ದಾರೆ.

ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಕಿಡಿಕಾರಿದ್ದಾರೆ.

ಸೋಮವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ, ಪ್ರವಾಹ ಪರಿಹಾರ ನಿಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!