ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸುಕ್ಷೇತ್ರ ಕಪ್ಪಲಗುದ್ದಿ ಗ್ರಾಮದಲ್ಲಿ ಸಂತ ಕನಕದಾಸರ ನೂತನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಜೊತೆಗೆ  
ರಾಜಕೀಯ

ಸಿದ್ದರಾಮಯ್ಯ ರಾಜಕೀಯ ಜೀವನ, ಉತ್ತರಾಧಿಕಾರಿ ಹೇಳಿಕೆಗೆ ಡಾ.ಯತೀಂದ್ರ ನೀಡಿದ ಸ್ಪಷ್ಟನೆಯೇನು?

ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ.

ಬೆಳಗಾವಿ: ತಂದೆಯವರ ರಾಜಕೀಯ ಜೀವನ ಅಂತಿಮ ಘಟ್ಟದಲ್ಲಿದೆ, ಸತೀಶ್ ಜಾರಕಿಹೊಳಿಯವರು ಅವರ ಉತ್ತರಾಧಿಕಾರಿಯಾಗಬಹುದು ಎಂದು ವಿಧಾನ ಪರಿಷತ್ ಸದಸ್ಯ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯವಾಗಿ ಭಾರೀ ಸದ್ದು ಮಾಡುತ್ತಿದೆ.

ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಯತೀಂದ್ರ, ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ. ಆ ರೀತಿ ಸೈದ್ಧಾಂತಿಕವಾಗಿ ರಾಜಕಾರಣ ಮಾಡುವವರನ್ನು ಲೀಡ್ ಮಾಡಲಿ ಅನ್ನೋ ಉದ್ದೇಶ ಇಟ್ಟುಕೊಂಡು ಹೇಳಿದ್ದೇನೆ. ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದಿದ್ದಾರೆ.

2028ರ ವಿಧಾನಸಭಾ ಚುನಾವಣೆಯಲ್ಲಿ ತಂದೆಯವರು ಸ್ಪರ್ಧಿಸಲ್ಲ: ಡಾ. ಯತೀಂದ್ರ

ಮುಂದಿನ ರಾಜಕೀಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ‌ ಎಂಬ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಯತೀಂದ್ರ, 2028ರ ವಿಧಾನಸಭಾ ಚುನಾವಣೆಯಲ್ಲಿ ತಂದೆಯವರು ಸ್ಪರ್ಧಿಸಲ್ಲ ಎಂದಿದ್ದಾರೆ. ಅದು ಆದ ಮೇಲೆ ಜಾತ್ಯತೀತ ಸಿದ್ಧಾಂತ ಇಟ್ಟುಕೊಂಡ ಸಾಕಷ್ಟು ನಾಯಕರಿದ್ದಾರೆ. ಇವರೆಲ್ಲರನ್ನೂ ಸತೀಶ್ ಜಾರಕಿಹೊಳಿ‌ ಮುನ್ನಡೆಸಲಿ ಎಂದರು.

2028ರ ನಂತರ ಆ ರೀತಿ ಲೀಡ್ ಮಾಡೋರು ಬೇಕು. ಸೈದ್ಧಾಂತಿಕ ರಾಜಕಾರಣ ಮಾಡುವವರ ಪೈಕಿ ಸಚಿವ ಸತೀಶ್ ಸಹ ಒಬ್ಬರು. ಆ ರೀತಿ ಸಿದ್ಧಾಂತ ಇಟ್ಟುಕೊಂಡವರಿಗೆ ಸತೀಶ್ ಮಾರ್ಗದರ್ಶನ ಮಾಡಲಿ. ನಾಳೆಯೇ ಕೊನೆ ದಿನ ಅಲ್ಲ, 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿರುವೆ ಎಂದಿದ್ದಾರೆ.

ನವೆಂಬರ್ ಕ್ರಾಂತಿ ಕೇವಲ ಊಹೆ

ನವೆಂಬರ್ ಕ್ರಾಂತಿ ಕೇವಲ ಊಹಾಪೋಹ. ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ, ಪಕ್ಷದಲ್ಲಿ ಆ ರೀತಿ ಚರ್ಚೆ ನಡೆದಿಲ್ಲ. ಆ ರೀತಿ ಸಿಎಂ ಆಗುವ ಅರ್ಹತೆ ಇದ್ದವರು ಹಲವು ನಾಯಕರು ಇದ್ದಾರೆ. ಈ ಬಗ್ಗೆ ಎಲ್ಲಾ ಶಾಸಕರು ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಹೊರತುಪಡಿಸಿದರೆ ಅವರ ಸ್ಥಾನ ತುಂಬುವ ಶಕ್ತಿ ಸತೀಶ್‌ಗೆ ಖಂಡಿತಾ ಇದೆ. ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿಯಾದ ಬಳಿಕ ಆ ಸ್ಥಾನ ತುಂಬುವ ಶಕ್ತಿ ತುಂಬುವ ಕೆಲವೇ ನಾಯಕರಲ್ಲಿ ಸತೀಶ್ ಜಾರಕಿಹೊಳಿ‌ ಒಬ್ಬರು ಎಂದರು.

ನಿನ್ನೆ ಡಾ. ಯತೀಂದ್ರ ಹೇಳಿದ್ದೇನು?

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಎಂಎಲ್‌ಸಿ ಡಾ. ಯತೀಂದ್ರ, ನಮ್ಮ ತಂದೆಯವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ವೈಚಾರಿಕವಾಗಿ ಪ್ರಗತಿಪರ ತತ್ವ, ಸಿದ್ಧಾಂತ ಇರುವ ನಾಯಕ ಬೇಕು. ಮಾರ್ಗದರ್ಶನ ಮಾಡಿ ನೇತೃತ್ವ ವಹಿಸಿಕೊಳ್ಳುವ ನಾಯಕ ಬೇಕು. ಸಚಿವ ಸತೀಶ್ ಜಾರಕಿಹೊಳಿ ಅಂತಹ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಾವು-Video

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

SCROLL FOR NEXT