ಗೃಹ ಸಚಿವ ಜಿ ಪರಮೇಶ್ವರ್ 
ರಾಜಕೀಯ

ಯತೀಂದ್ರ ಹೇಳಿದ್ರಲ್ಲಿ ತಪ್ಪೇನಿದೆ? ಸತೀಶ್ ಜಾರಕಿಹೊಳಿ ಪರ ಸಚಿವ ಪರಮೇಶ್ವರ್ ಬ್ಯಾಟಿಂಗ್; Video

ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ ಸಿಎಲ್ಪಿ ಸಭೆ ಕರೆಯುತ್ತಾರೆ.

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ಸೈದ್ಧಾಂತಿಕವಾಗಿ ಸತೀಶ್ ಜಾರಕಿಹೊಳಿ ಹೆಸರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಸತೀಶ್ ಜಾರಕಿಹೊಳಿಯವರು ಹಿಂದೆ ಅಹಿಂದ ಚಳುವಳಿಯಲ್ಲಿದ್ದರು. ಅವರಿಗೆ ಆ ಬದ್ಧತೆ ಇದೆ ಎಂದು ಹೇಳಿರಬಹುದು. ಸಿಎಂ ಹುದ್ದೆಯನ್ನು ದೃಷ್ಟಿಯಲ್ಲಿ ಇಟ್ಕೊಂಡು ಅವರು ಹೇಳಿಲ್ಲ ಎಂದು ಹೇಳಿದರು.

ಇದೇ ವೇಳೆ ಸಿಎಂ ರೇಸ್ ನಲ್ಲಿ ತಮ್ಮ ಹೆಸರಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವುದಾದರೂ ರೇಸ್ ಇರಲಿ, ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ಸಂದರ್ಭ ಬಂದಾಗ ಸಿಎಲ್ಪಿ ಸಭೆ ಕರೆಯುತ್ತಾರೆ.

ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್ ಗೆ ವರದಿ ಕೊಟ್ಟು ನಂತರ ಘೋಷಣೆ ಆಗುತ್ತದೆ. ಇದು ಪದ್ಧತಿ. ಇದನ್ನು ಶಾರ್ಟ್ ಕಟ್ ಹೇಗೆ ಮಾಡುತ್ತಾರೆ ಹೇಳಿ ಎಂದು ಪ್ರಶ್ನಿಸಿದರು. ಇದೇ ವೇಳೆ ನಾನು, ಸತೀಶ್, ಮಹಾದೇವಪ್ಪ ಕಾಫಿಗೆ ಸೇರಿದ್ದೆವು ಅಷ್ಟೇ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT